ಶನಿವಾರ, ನವೆಂಬರ್ 26, 2022
23 °C

ಅಕ್ರಮ ಹುಕ್ಕಾಬಾರ್: ಸಿಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಂದಿರಾನಗರದಲ್ಲಿ ಅಕ್ರಮವಾಗಿ ತೆರೆದಿದ್ದ ಹುಕ್ಕಾ ಬಾರ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ಮಾಡಿದ್ದು, ₹ 70 ಸಾವಿರ ಮೌಲ್ಯದ ಪರಿಕರಗಳನ್ನು ಜಪ್ತಿ ಮಾಡಿದ್ದಾರೆ.

‘ಇಎಸ್‌ಐ ಆಸ್ಪತ್ರೆ ಸಮೀಪದಲ್ಲಿರುವ ಪರಮಹಂಸ ಯೋಗಾನಂದ ರಸ್ತೆಯ ಕಟ್ಟಡವೊಂದರಲ್ಲಿ ‘ವೈಟ್‌ಮಿಸ್ಟ್ ಕೆಫೆ’ ಹೆಸರಿನಲ್ಲಿ ಹುಕ್ಕಾ ಬಾರ್ ತೆರೆಯಲಾಗಿತ್ತು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, ಅಕ್ರಮವನ್ನು ಪತ್ತೆ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಹುಕ್ಕಾ ಬಾರ್ ಮಾಲೀಕ, ವ್ಯವಸ್ಥಾಪಕ ಹಾಗೂ ಕ್ಯಾಷಿಯರ್ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ’ ಎಂದೂ ತಿಳಿಸಿದರು.

‘ಬಗೆ ಬಗೆಯ ಜಾಹೀರಾತು ನೀಡಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪಿಗಳು, ಅಕ್ರಮವಾಗಿ ಹುಕ್ಕಾ ಮಾರಿ ಹಣ ಸಂಪಾದಿಸುತ್ತಿದ್ದರು. ಇವರ ಕೃತ್ಯದಿಂದಾಗಿ ಯುವಕರು ದಾರಿ ತಪ್ಪುತ್ತಿದ್ದರು’ ಎಂದೂ ಸಿಸಿಬಿ ಪೊಲೀಸರು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು