ಭಾನುವಾರ, ನವೆಂಬರ್ 29, 2020
24 °C

ವಿಳಾಸ ಕೇಳುವ ನೆಪದಲ್ಲಿ ಸುಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಳಾಸ ಕೇಳುವ ನೆಪದಲ್ಲಿ ವ್ಯಾಪಾರಿ ಪಿ. ಡಿಯೆ ಎಂಬುವರನ್ನು ಸುಲಿಗೆ ಮಾಡಲಾಗಿದ್ದು, ಈ ಸಂಬಂಧ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬೇಗೂರು ನಿವಾಸಿಯಾದ ಡಿಯೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಹುಳಿಮಾವು ಪೊಲೀಸರು ಹೇಳಿದರು.

‘ದೂರುದಾರರು ಬೇಗೂರಿನ ಕೊಪ್ಪ ರಸ್ತೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ವ್ಯಾಪಾರ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೊರಟಿದ್ದರು. ಪಲ್ಸರ್ ಬೈಕ್‌ನಲ್ಲಿ ಬಂದಿದ್ದ ಇಬ್ಬರು, ವಿಳಾಸ ಕೇಳುವ ನೆಪದಲ್ಲಿ ಅಡ್ಡಗಟ್ಟಿದ್ದರು. ನಂತರ ಚಾಕು ತೋರಿಸಿ ಬೆದರಿಸಿದ್ದರು. ಮೊಬೈಲ್ ಹಾಗೂ ಡಿಕ್ಕಿಯಲ್ಲಿದ್ದ ₹ 35 ಸಾವಿರ ಸುಲಿಗೆ ಮಾಡಿಕೊಂಡು ಪರಾರಿಯಾಗಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು