ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆ ವಾರ್ಷಿಕೋತ್ಸವ 26ಕ್ಕೆ

Last Updated 21 ಡಿಸೆಂಬರ್ 2021, 20:51 IST
ಅಕ್ಷರ ಗಾತ್ರ

ಬೆಂಗಳೂರು: ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಮೂರನೇ ವಾರ್ಷಿಕೋತ್ಸವ ಇದೇ 26ನೇ ಭಾನುವಾರ ಬೆಳಿಗ್ಗೆ 10.30ಕ್ಕೆ ನಗರದ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಸಂಸ್ಥೆಯ ಗೌರವಾಧ್ಯಕ್ಷ ರಂಗಶ್ರೀ ರಂಗಸ್ವಾಮಿ, ‘ಕೊರೊನಾ ಸಂದರ್ಭದಲ್ಲಿ ನೆರವಾದ ಸಮಾಜ ಸೇವಕರಿಗೆ, ಆಶಾಕಾರ್ಯಕರ್ತರಿಗೆ ಮತ್ತು ಪೌರಕಾರ್ಮಿಕರಿಗೆ ವಾರ್ಷಿಕೋತ್ಸವದ ಪ್ರಯುಕ್ತ ಸನ್ಮಾನ ಏರ್ಪಡಿಸಿದ್ದೇವೆ. ಕಲಾವಿದ ಹೊನ್ನವಳ್ಳಿ ಕೃಷ್ಣ ಅವರಿಗೆ ದಿವಂಗತ ಪುನೀತ್ ರಾಜ್‌ಕುಮಾರ್‌ ಹೆಸರಿನಲ್ಲಿ ‘ರಾಜರತ್ನ’ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ನೇತ್ರದಾನ ನೋಂದಣಿಯೂ ನಡೆಯಲಿದೆ. ಅಂಗವಿಕಲರಿಗೆ ಗಾಲಿಕುರ್ಚಿ, 25 ಮಂದಿ ಬಡವರಿಗೆ ತಲಾ ₹ 5 ಸಾವಿರ ಸಹಾಯಧನ, ಮೃತ ಯೋಧರ ಕುಟುಂಬದವರಿಗೆ ಗೌರವಧನ ಮತ್ತು ಬಡವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಸಾಮಗ್ರಿ ವಿತರಿಸಲಿದ್ದೇವೆ’ ಎಂದರು.

‘ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಉದ್ಘಾಟಿಸಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಲೋಕಾಯುಕ್ತ ಸಂತೋಷ್‌ ಹೆಗ್ಡೆ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT