ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆ.ಪಿ.ನಗರ: ₹ 100 ಕೋಟಿ ಮೌಲ್ಯದ ಆಸ್ತಿ ಒತ್ತುವರಿ ತೆರವುಗೊಳಿಸಿದ ಬಿಡಿಎ 

Last Updated 11 ನವೆಂಬರ್ 2021, 12:08 IST
ಅಕ್ಷರ ಗಾತ್ರ

ಬೆಂಗಳೂರು: ಜೆ.ಪಿ.ನಗರದ ಆಲಹಳ್ಳಿಯಲ್ಲಿ ಒತ್ತುವರಿಯಾಗಿದ್ದ 4 ಎಕರೆ 20 ಗುಂಟೆ ಸ್ವತ್ತನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಗುರುವಾರ ಸ್ವಾಧೀನಪಡಿಸಿಕೊಂಡಿದೆ.

ಇದರ ಮೌಲ್ಯ ಸುಮಾರು ₹ 100 ಕೋಟಿ ಎಂದು ಅಂದಾಜಿಸಲಾಗಿದೆ. ಒತ್ತುವರಿಯಾಗಿದ್ದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣವಾಗಿದ್ದ 40 ಶೆಡ್ ಗಳನ್ನು ಬಿಡಿಎ ದಕ್ಷಿಣ ವಲಯದ ಕಾರ್ಯಪಾಲಕ ಎಂಜಿನಿಯರ್ ಎಚ್.ಎಸ್.ಚುಂಚೇಗೌಡ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.

ಜೆಪಿ ನಗರ ಬಡಾವಣೆಯ 9 ನೇ ಹಂತದ ನಿರ್ಮಾಣಕ್ಕೆಂದು 1988 ರಲ್ಲಿ ಈ ಜಾಗ ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. 1997 ರಲ್ಲಿ ಅಂತಿಮ ಅಧಿಸೂಚನೆಯನ್ನು ಹೊರಡಿಸಿ ಜಾಗವನ್ನು ಸ್ವಾಧೀನಕ್ಕೆ ಪಡೆದಿತ್ತು. ಕೆಲವರು ತಾತ್ಕಾಲಿಕವಾಗಿ 40 ಶೆಡ್ ಗಳನ್ನು ನಿರ್ಮಾಣ ಮಾಡಿ ಜಾಗ ತಮ್ಮದೆಂದು ಪ್ರತಿಪಾದಿಸಿದ್ದರು. ಈ ಕುರಿತ ವ್ಯಾಜ್ಯದಲ್ಲಿ ನ್ಯಾಯಾಲಯವು ಬಿಡಿಎ ಪರವಾಗಿ ತೀರ್ಪು ನೀಡಿದೆ‌. ಈ ಜಾಗವನ್ನು ಮತ್ತೆ ಸುಪರ್ದಿಗೆ ಪಡೆಯುವಂತೆಯೂ ಇತ್ತೀಚೆಗೆ ಆದೇಶ ಮಾಡಿತ್ತು.
ನ್ಯಾಯಾಲಯದ ಆದೇಶದ ಮೇರೆಗೆ ಬಿಡಿಎ ಅಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್, ಡಿವೈಎಸ್ ಪಿ ರವಿಕುಮಾರ್ ಸೇರಿದಂತೆ 75 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಭದ್ರತೆಯಲ್ಲಿ ಶೆಡ್ ಗಳನ್ನುತೆರವುಗೊಳಿಸಿದರು.

5ಕ್ಕೂ ಅಧಿಕ ಜೆಸಿಬಿಗಳನ್ನು ಕಾರ್ಯಾಚರಣೆಗೆ ಬಳಸಲಾಯಿತು.

ಅತಿಕ್ರಮಣ ತೆರವು ಕುರಿತುಪ್ರತಿಕ್ರಿಯಿಸಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, 'ಪ್ರಾಧಿಕಾರದ ಹಲವಾರು ಆಸ್ತಿಗಳು ಒತ್ತುವರಿ ಆಗಿವೆ. ಈ ಆಸ್ತಿಗಳನ್ನು ಮತ್ತೆ ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ. ಈ ಪ್ರಕ್ರಿಯೆ ಮುಂದುವರಿಯಲಿದೆ' ಎಂದರು.

ಬಿಡಿಎಗೆ ಸೇರಿದ ಆಸ್ತಿಗಳನ್ನು ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಆಸ್ತಿಯನ್ನು ಮರು ಸ್ವಾಧೀನಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ನಿವೇಶನಗಳ ಹರಾಜು:ಬಿಡಿಎಗೆ ಸೇರಿದ ಸ್ವತ್ತುಗಳನ್ನು ವಶಪಡಿಸಿಕೊಂಡು ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಅವುಗಳನ್ನು ಸಾರ್ವಜನಿಕರಿಗೆ ಹರಾಜಿನ ಮೂಲಕ ಹಂಚಿಕೆ ಮಾಡಬೇಕೆಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಪ್ರಕಾರ ಬಿಡಿಎಯ ಒತ್ತುವರಿಯಾದ ಆಸ್ತಿಗಳನ್ನು ಸ್ವಾಧಿನಕ್ಕೆ ಪಡೆದುಕೊಂಡು ಹಂತಹಂತವಾಗಿ ನಿವೇಶನಗಳನ್ನಾಗಿ ಅಭಿವೃದ್ಧಿಪಡಿಸಿ ಹರಾಜಿನ ಮೂಲಕ ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT