ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆರೆಗಳ ಪುನಶ್ಚೇತನಕ್ಕೆ ಆದ್ಯತೆ

Last Updated 11 ಫೆಬ್ರುವರಿ 2021, 19:09 IST
ಅಕ್ಷರ ಗಾತ್ರ

ಹೆಸರಘಟ್ಟ: ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಎಲ್ಲ ಗ್ರಾಮಗಳಿಗೆ ಪ್ರಾಥಮಿಕ ಸೌಲಭ್ಯ ನೀಡಲಾಗುವುದು. ಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅದ್ಯತೆ ನೀಡುತ್ತೇನೆ ಎಂದು ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಕೆ.ರಘು ಹೇಳಿದರು.

ಅವರು ಗುರುವಾರ ಅಧ್ಯಕ್ಷ ಸ್ಥಾನ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿದರು.

’ಗ್ರಾಮದ ಎಲ್ಲ ಕೆರೆಗಳ ಹೂಳು ತೆಗೆದು ಪುನಶ್ಚೇತನಗೊಳಿಸಲಾಗುವುದು. ಕೆರೆಯಲ್ಲಿ ನೀರು ಸಂಗ್ರಹವಾಗುವಂತೆ ಮಾಡಿ, ಜೀವ ಸಂಕಲುಗಳ ಬದುಕಿಗೆ ಆಸರೆ ನೀಡಲಾಗುವುದು. ಕೆರೆ ಅಭಿವೃದ್ದಿಪಡಿಸಿದರೆ ರೈತರಿಗೆ ಬೆಳೆ ಬೆಳೆಯಲು ಅನುಕೂಲವಾಗುತ್ತದೆ. ಹಾಗಾಗಿ ಹೆಚ್ಚಿನ ಅನುದಾನ ತಂದು ಕೆರೆಗಳನ್ನು ಪುನಶ್ಚೇತನಗೊಳಿಸಲಾಗುವುದು‘ ಎಂದರು.

‘ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸಬೇಕಾಗಿದೆ. ಅನೇಕ ಯೋಜನೆಗಳ ಅರಿವು ಗ್ರಾಮಸ್ಥರಿಗೆ ಇರುವುದಿಲ್ಲ. ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ತರಲು ಶ್ರಮಿಸುತ್ತೇನೆ. ಗ್ರಾಮಸ್ಥರಿಗೆ ಉದ್ಯೋಗ ಕಲ್ಪಿಸಿ ಕೊಡುವುದರ ಮೂಲಕ ಅವರ ಬದುಕಿಗೆ ಭದ್ರತೆ ನೀಡಬೇಕಾಗಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT