ಬೆಂಗಳೂರು: ‘ಮನೆಗೆ ನುಗ್ಗಿದ್ದ ಪತಿ ವಿಜಯ್‌ಕುಮಾರ್ ನನ್ನ ಬೆರಳು ಕಚ್ಚಿ ಜೀವ ಬೆದರಿಕೆಯೊಡ್ಡಿದ್ದಾನೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಕೋಣನಕುಂಟೆ ಠಾಣೆಗೆ ದೂರು ನೀಡಿದ್ದಾರೆ.

‘ಸ್ಥಳೀಯ ನಿವಾಸಿಯಾಗಿರುವ 40 ವರ್ಷದ ಮಹಿಳೆ ಇತ್ತೀಚೆಗೆ ದೂರು ನೀಡಿದ್ದಾರೆ. ಅವರ ಪತಿ ವಿಜಯ್‌ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ದೂರುದಾರ ಮಹಿಳೆ ಹಾಗೂ ವಿಜಯ್‌ಕುಮಾರ್, 23 ವರ್ಷಗಳ ಹಿಂದೆ ಮದುವೆಯಾಗಿದ್ದಾರೆ. ದಂಪತಿಗೆ ಮಗನಿದ್ದಾನೆ. ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಪತ್ನಿ, ಕೆಲ ತಿಂಗಳ ಹಿಂದೆಯಷ್ಟೇ ಮನೆ ಬಿಟ್ಟು ಬಂದಿದ್ದರು. ಕೊತ್ತನೂರಿನ ಸಾರಧಿ ನಗರದ ಬಾಡಿಗೆ ಮನೆಯಲ್ಲಿ ಮಗನ ಜೊತೆ ನೆಲೆಸಿದ್ದರು’ ಎಂದು ತಿಳಿಸಿವೆ.

‘ಮನೆಗೆ ವಾಪಸು ಬರುವಂತೆ ವಿಜಯ್‌ಕುಮಾರ್ ಪದೇ ಪದೇ ಕರೆ ಮಾಡಿ ಪೀಡಿಸುತ್ತಿದ್ದ. ಮನೆಗೆ ಬರುವುದಿಲ್ಲವೆಂದು ಮಹಿಳೆ ಹೇಳಿದ್ದರು. ಜುಲೈ 28ರಂದು ಮನೆಗೆ ನುಗ್ಗಿದ್ದ ಆರೋಪಿ, ಪತ್ನಿ ಜೊತೆ ಜಗಳ ತೆಗೆದಿದ್ದ. ಎಡಗೈನ ಬೆರಳು ಕಚ್ಚಿದ್ದ ಆರೋಪಿ, ‘ನಿನ್ನನ್ನೂ ಕಚ್ಚಿ ಕೊಲೆ ಮಾಡುತ್ತೇನೆ’ ಎಂಬುದಾಗಿ ಬೆದರಿಸಿದ್ದ. ಈ ಸಂಗತಿ ದೂರಿನಲ್ಲಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.