ಮಂಗಳವಾರ, 20 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ನಿಗೆ ಪೆಟ್ರೋಲ್ ‌ಸುರಿದು ಕೊಲೆಗೆ ಯತ್ನಿಸಿದ್ದ ಪತಿ ಬಂಧನ

Published 22 ನವೆಂಬರ್ 2023, 23:46 IST
Last Updated 22 ನವೆಂಬರ್ 2023, 23:46 IST
ಅಕ್ಷರ ಗಾತ್ರ

ಬೆಂಗಳೂರು: ಪತ್ನಿಗೆ ಪೆಟ್ರೋಲ್ ‌ಸುರಿದು ಬೆಂಕಿಹಚ್ಚಿ ಕೊಲೆಗೆ ಯತ್ನಿಸಿದ್ದ ಪತಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕದಿರೇನಹಳ್ಳಿ ನಿವಾಸಿ ಶ್ರೀನಿವಾಸ್ ಬಂಧಿತ ಆರೋಪಿ. ಗಾಯಗೊಂಡಿರುವ ಪುಷ್ಪ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀನಿವಾಸ್ 18 ವರ್ಷಗಳ ಹಿಂದೆ ಪುಷ್ಪ ಅವರನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಶ್ರೀನಿವಾಸ್ ಪ್ಲಂಬರ್ ಕೆಲಸ ಮಾಡುತ್ತಿದ್ದು, ಪುಷ್ಪ ಆಸ್ಪತ್ರೆಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡಿಕೊಂಡಿದ್ದಾರೆ. ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ನವೆಂಬರ್ 16ರಂದು ಮದ್ಯದ ಅಮಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಬಳಿಕ ಆತನೇ ಬೆಂಕಿ ನಂದಿಸಲು ಪಯತ್ನಿಸಿದ್ದ. ಸ್ಥಳೀಯರ ನೆರವಿನಿಂದ ಪತ್ನಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದ.‌ ಪುಷ್ಪ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT