ಭಾನುವಾರ, ನವೆಂಬರ್ 29, 2020
19 °C

ಪತ್ನಿ ಜೊತೆಗಿನ ವಿಡಿಯೊ ಹರಿಬಿಟ್ಟ ಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತನ್ನ ಪತ್ನಿ ಜೊತೆ ಏಕಾಂತದಲ್ಲಿದ್ದ ವೇಳೆ ಚಿತ್ರೀಕರಿಸಿಕೊಂಡಿದ್ದ ವಿಡಿಯೊವನ್ನೇ ಪತಿಯೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ಈ ಸಂಬಂಧ ವೈಟ್‌ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

‘ಕೆ.ಆರ್.ಪುರ ನಿವಾಸಿ 29 ವರ್ಷದ ಮಹಿಳೆ ದೂರು ನೀಡಿದ್ದಾರೆ. ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

’ಪತಿಯಿಂದ ವಿಚ್ಛೇದನ ಪಡೆದು ಪ್ರತ್ಯೇಕವಾಗಿ ವಾಸವಿದ್ದ ಮಹಿಳೆ, ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಚೇರಿಯಲ್ಲಿ ಸಹೋದ್ಯೋಗಿಯಾಗಿದ್ದ ಆರೋಪಿ, ಮಹಿಳೆಯ ಸ್ನೇಹ ಬೆಳೆಸಿದ್ದ. ನಂತರ, ಸಲುಗೆ ಬೆಳೆದಿತ್ತು. ಇಬ್ಬರೂ ಕಳೆದ ವರ್ಷ ಮದುವೆಯಾಗಿದ್ದರು.’

‘ಮೊದಲ ಪತಿ ಜತೆ ಮಹಿಳೆ ಸಂಬಂಧ ಮುಂದುವರಿಸಿರುವ ಬಗ್ಗೆ ಆರೋಪಿ ಅನುಮಾನಪಟ್ಟಿದ್ದ. ಆ ಬಗ್ಗೆ ನಿತ್ಯ ಜಗಳ ಮಾಡಲಾರಂಭಿಸಿದ್ದ. ಆರೋಪಿ ವಿರುದ್ಧ ಮಹಿಳೆಯು ಬೊಮ್ಮನಹಳ್ಳಿ ಠಾಣೆಗೆ ದೂರು ನೀಡಿದ್ದರು. ಅದರಿಂದ ಸಿಟ್ಟಾಗಿದ್ದ ಆರೋಪಿ, ಮಹಿಳೆ ಜೊತೆಗಿನ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ. ಅದನ್ನು ನೋಡಿದ್ದ ಮಹಿಳೆ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು