ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗುಡಿಸಲುಗಳಿಗೆ ಬೆಂಕಿ: ಯಾಕೆ ಕ್ರಮ ಜರುಗಿಸಿಲ್ಲ’

Last Updated 12 ಜೂನ್ 2020, 21:21 IST
ಅಕ್ಷರ ಗಾತ್ರ

ಬೆಂಗಳೂರು: ‘ಕಾಚರಕನಹಳ್ಳಿ ಬಳಿಯ ಕೊಳೆಗೇರಿಯಲ್ಲಿ ವಲಸೆ ಕಾರ್ಮಿಕರಿಗೆ ಸೇರಿದ 90ಕ್ಕೂ ಅಧಿಕ ಗುಡಿಸಲುಗಳಿಗೆ ಬೆಂಕಿ ಹಚ್ಚಿರುವುದು ದುರದೃಷ್ಟಕರ’ ಎಂದು ಹೈಕೋರ್ಟ್ ಹೇಳಿದೆ.

‘ಈ ಸಂಬಂಧ ಈತನಕ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಕಾರಣ ಏನು ಎಂಬುದನ್ನು ತಿಳಿಸಿ’ ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ.

ವಕೀಲೆ ವೈಶಾಲಿ ಹೆಗ್ಡೆ ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

‘ಲಾಕ್‌ಡೌನ್ ಪರಿಸ್ಥಿತಿಯ ದುರ್ಲಾಭ ಪಡೆದು ಬಡ ಕಾರ್ಮಿಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿರುವುದು ನಿಜಕ್ಕೂ ದುರದೃಷ್ಟಕರ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ’ ಎಂದು ನ್ಯಾಯಪೀಠ ಸರ್ಕಾರವನ್ನು ಎಚ್ಚರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT