ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದೂ ಆಗಿ ಎಲ್ಲರನ್ನೂ ಪ್ರೀತಿಸುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Published 29 ಜನವರಿ 2024, 16:13 IST
Last Updated 29 ಜನವರಿ 2024, 16:13 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಕೂಡ ಒಬ್ಬ ಹಿಂದೂ. ಸಂವಿಧಾನದಲ್ಲಿ ಹೇಳಿರುವ ಜಾತ್ಯತೀತ ತತ್ವ, ಸಹಬಾಳ್ವೆ, ಸಹಿಷ್ಣುತೆಯಲ್ಲಿ ನನಗೆ ನಂಬಿಕೆ ಇದೆ. ಹಿಂದೂ ಧರ್ಮೀಯನಾಗಿ ಎಲ್ಲ ಧರ್ಮದ ಜನರನ್ನೂ ಪ್ರೀತಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಭಗವಾಧ್ವಜ ಹಾರಿಸುವುದಕ್ಕೆ ನಮ್ಮ ವಿರೋಧವಿಲ್ಲ. ಮಂಡ್ಯದ ಕೆರಗೋಡಿನಲ್ಲಿ ರಾಷ್ಟ್ರ ಧ್ವಜ ಹಾರಿಸಲು ಅನುಮತಿ ಪಡೆಯಲಾಗಿತ್ತು. ರಾಷ್ಟ್ರ ಧ್ವಜವನ್ನೇ ಹಾರಿಸಬೇಕಿತ್ತು. ಆದರೆ, ಅಲ್ಲಿ ಭಗವಾಧ್ವಜ ಹಾರಿಸಿದ್ದರಿಂದ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ’ ಎಂದರು.

ಗ್ರಾಮ ಪಂಚಾಯಿತಿಯವರು ನೀಡಿದ್ದ ಅನುಮತಿಯಲ್ಲಿನ ಷರತ್ತುಗಳನ್ನು ಪಾಲಿಸಿದ್ದರೆ ಜಿಲ್ಲಾಡಳಿತವು ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದು ಹೇಳಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮತ್ತು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿನೀಡಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣೆ ಸಮೀಪಿಸುತ್ತಿರುವುದರಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT