ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್‌ಸುಂದರ್‌ ಗಾಯಕವಾಡ್

Published 18 ಮಾರ್ಚ್ 2024, 23:30 IST
Last Updated 18 ಮಾರ್ಚ್ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶಾಮಸುಂದರ್ ಗಾಯಕವಾಡ್ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯಕ್ಕೆ ಬಿಜೆಪಿ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ. ರಾಜ್ಯದಲ್ಲಿ ಶೇ 52ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗದ ಕುರುಬರು, ನೇಕಾರರು, ಗೊಲ್ಲರು, ಮೀನುಗಾರರು, ತಿಗಳರು, ಗಾಣಿಗರು, ಕುಂಬಾರರು, ಮಡಿವಾಳ, ದೇವಾಡಿಗ ಸಮುದಾಯದವರಿಗೆ ಟಿಕೆಟ್‌ ನೀಡದೇ ಅನ್ಯಾಯ ಮಾಡಿದೆ. ವೀರಶೈವರು, ಬ್ರಾಹ್ಮಣರಿಗೆ ಮಾತ್ರ ಬಿಜೆಪಿ ಎನ್ನುವ ಪರಿಸ್ಥಿತಿ ಇದೆ’ ಎಂದು ದೂರಿದರು.

ರಾಷ್ಟ್ರೀಯ ಮರಾಠ ಪಾರ್ಟಿ ಅಧ್ಯಕ್ಷರಾದ ಮನೋಹರ್ ರಾವ್ ಜಾಧವ್, ‘ರಾಜ್ಯದ 10 ಲೋಕಸಭಾ ಕ್ಷೇತ್ರಗಳಿಂದ ರಾಷ್ಟ್ರೀಯ ಮರಾಠ ಪಾರ್ಟಿಯ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಶಾಮಸುಂದರ್ ಗಾಯಕವಾಡ್ (ಉತ್ತರ ಕನ್ನಡ), ಜಿ.ಡಿ. ಘೋರ್ಪಡೆ (ಧಾರವಾಡ), ನಾರಾಯಣ್‌ ರಾವ್ ಗಾಯಕವಾಡ್ (ಹಾವೇರಿ–ಗದಗ), ಈಶ್ವರ್ ರುದ್ಧಪ್ಪ ಗಾಡಿ (ಬೆಳಗಾವಿ), ವಿನೋದ್ ಸಾಳುಂಕೆ (ಚಿಕ್ಕೋಡಿ), ವಿಜಯಕುಮಾರ್ ಪಾಟೀಲ್ (ಬೀದರ್), ಶ್ರೀಕಾಂತ್ ಮುಧೋಳ (ಬಾಗಲಕೋಟೆ), ಎಂ.ಡಿ. ದೇವರಾಜ್ ಸಿಂಧೆ (ಶಿವಮೊಗ್ಗ), ವಿಜಯಪುರ ಮತ್ತು ಕಲಬುರಗಿಯಲ್ಲಿ ‍ಎಸ್.ಸಿ. ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT