ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಐಪಿಎಸ್ ಅಧಿಕಾರಿಗಳಾದ ಡಾ.ಎಂ.ಬಿ. ಬೋರಲಿಂಗಯ್ಯ ಮತ್ತು ವರ್ತಿಕಾ ಕಟಿಯಾರ್ ಅವರನ್ನು ವರ್ಗಾ ವಣೆಗೊಳಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.
ಬೋರಲಿಂಗಯ್ಯ ಅವರನ್ನು ರಾಜ್ಯದ ಆಂತರಿಕ ಭದ್ರತಾ ವಿಭಾಗದ ಎಸ್ಪಿ ಮತ್ತು ವರ್ತಿಕಾ ಅವರನ್ನು ರೈಲ್ವೆ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಆಯುಕ್ತರಾದ ಎನ್. ಮಂಜುಶ್ರೀ ಅವರಿಗೆ ರಾಜ್ಯ ಔಷಧಿ ಪೂರೈಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಿ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.