ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿಯವರ ಎಸಿಎಸ್‌ ಆಗಿ ಐಎಎಸ್‌ ಅಧಿಕಾರಿ ಎಲ್‌.ಕೆ. ಅತೀಕ್‌ ನೇಮಕ

Published 27 ನವೆಂಬರ್ 2023, 15:48 IST
Last Updated 27 ನವೆಂಬರ್ 2023, 15:48 IST
ಅಕ್ಷರ ಗಾತ್ರ

ಬೆಂಗಳೂರು: ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್‌ ಅಧಿಕಾರಿ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ಸೋಮವಾರ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ಹಿರಿಯ ಐಎಎಸ್‌ ಅಧಿಕಾರಿ ರಜನೀಶ್‌ ಗೋಯಲ್‌ ಅವರನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ಈ ಕಾರಣದಿಂದ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಮುಕ್ತಗೊಳಿಸಿ, ಆ ಹುದ್ದೆಗೆ ಅತೀಕ್‌ ಅವರನ್ನು ನೇಮಿಸಲಾಗಿದೆ.

ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಅತೀಕ್‌ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೊಣೆಯನ್ನೂ ವಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT