ಗುರುವಾರ , ಜುಲೈ 16, 2020
24 °C

ಮೂವರು ಐಎಎಸ್‌ ಅಧಿಕಾರಿಗಳ ನಿವೃತ್ತಿ: ಇತರರಿಗೆ ಹೆಚ್ಚವರಿಯಾಗಿ ಹುದ್ದೆ ಹಂಚಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳು ನಿವೃತ್ತರಾದ ಹಿನ್ನೆಲೆಯಲ್ಲಿ ಅವರ ಬಳಿ ಇದ್ದ ಹುದ್ದೆಗಳನ್ನು ಇತರರಿಗೆ ಹೆಚ್ಚುವರಿಯಾಗಿ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಆರ್‌.ಆರ್‌. ಜನ್ನು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಮತ್ತು ಸರ್ವೆ, ಸೆಂಟ್ಲಮೆಂಟ್‌ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಎಂ.ಕೆ. ಶ್ರೀರಂಗಯ್ಯ, ಕಾರ್ಮಿಕ ಇಲಾಖೆ ಆಯುಕ್ತ ಕೆ.ಜಿ. ಶಾಂತಾರಾಮ್‌ ನಿವೃತ್ತಿಯಾಗಿದ್ದಾರೆ.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಎನ್‌. ಮಂಜುಳಾ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಹೊಣೆ ಹೆಚ್ಚುವರಿಯಾಗಿ ನೀಡಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಆರ್‌. ರಾಮಚಂದ್ರನ್‌ ಅವರಿಗೆ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್ಸನ್ ಸೊಸೈಟಿಯ ಯೋಜನಾ ನಿರ್ದೇಶಕ ಹೊಣೆ ನೀಡಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತ ಕೆ.ಪಿ. ಮೋಹನ್‌ರಾಜ್‌ ಅವರಿಗೆ ಸರ್ವೆ, ಸೆಂಟ್ಲಮೆಂಟ್‌ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಹುದ್ದೆ ವಹಿಸಲಾಗಿದೆ. ಕಬ್ಬು ಅಭಿವೃದ್ಧಿ ಆಯುಕ್ತ ಮತ್ತು ಸಕ್ಕರೆ ನಿರ್ದೇಶಕ ಅಕ್ರಂ ಪಾಷಾ ಅವರಿಗೆ ಕಾರ್ಮಿಕ ಇಲಾಖೆ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು