ಪ್ರಜಾವಾಣಿ ವಾರ್ತೆ

ದಾವಣಗೆರೆ: ಇಲ್ಲಿನ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರವು ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ನಿಂದ ನೀಡುವ 2018ನೇ ಸಾಲಿನ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರಾಷ್ಟ್ರೀಯ ಕೃಷಿ ವಿಜ್ಞಾನ ಪ್ರೋತ್ಸಾಹನ್ ಪುರಸ್ಕಾರಕ್ಕೆ ಭಾಜನವಾಗಿದೆ.

ದೇಶದಾದ್ಯಂತ 706 ಕೃಷಿ ವಿಜ್ಞಾನ ಕೇಂದ್ರಗಳನ್ನು 11 ವಲಯಗಳಾಗಿ ವಿಂಗಡಿಸಲಾಗಿದ್ದು, ವಲಯ 11ರಲ್ಲಿ ಈ ಕೆವಿಕೆಗೆ ಪ್ರಶಸ್ತಿ ಬಂದಿದೆ. ಜುಲೈ 16ರಂದು ನವದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘2005ರಲ್ಲಿ ಕಾರ್ಯಾರಂಭ ಮಾಡಿದ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರವು ಜಿಲ್ಲೆಯ ಕೃಷಿ ವಲಯದ ಸಮಸ್ಯೆಗಳನ್ನು ಗುರುತಿಸಿ ಅವುಗಳ ಪರಿಹಾರ ಭಾಗವಾಗಿ ಮುಂಚೂಣಿ ವಿಸ್ತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ರೈತರಿಗೆ, ಮಹಿಳೆಯರಿಗೆ ಗ್ರಾಮೀಣ ಯುವಕರಿಗೆ, ಸರ್ಕಾರೇತರ ಸಂಸ್ಥೆಗಳಿಗೆ ಕೃಷಿ ತರಬೇತಿ ಆಯೋಜಿಸಿದೆ. ಸಿದ್ಧನೂರು ಮತ್ತು ಅಗಸನಕಟ್ಟೆ ಗ್ರಾಮಗಳಲ್ಲಿ ‘ಹವಾಮಾನ ವೈಪರೀತ್ಯಕ್ಕೆ ಚೇತರಿಕೆಯುಕ್ತ ಕೃಷಿ ತಂತ್ರಜ್ಞಾನಗಳ ರಾಷ್ಟ್ರೀಯ ಅನುಶೋಧಕ ಯೋಜನೆಗಳನ್ನು’ (ನಿಕ್ರಾ) ಪರಿಗಣಿಸಿ ಈ ಪ್ರಶಸ್ತಿ ನೀಡಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.