ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಹಿಂಸಾತ್ಮಕ ಹಾಗೂ ಅನುಮತಿ ಇಲ್ಲದೆಪ್ರತಿಭಟನಾ ರ್ಯಾಲಿಗಳನ್ನು ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

‘ಅಲ್ಲದೆ, ಪ್ರತಿಭಟನೆಗೆ ಅನುಮತಿ ಕೋರಿ ಸಾಕಷ್ಟು ಅರ್ಜಿಗಳು ಬಂದಿವೆ. ಯಾರಿಗೂ ಪ್ರತಿಭಟನೆಗೆ ಅವಕಾಶ ನೀಡದೆ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.ಈಗಾಗಲೇ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಹಾಗೂ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ನೀಡಲು ಚಿಂತನೆ ನಡೆಸಿದ್ದೇವೆ’ಎಂದು ಕಮಿಷನರ್ ಹೇಳಿದರು.

ಉತ್ತರಭಾರತ ಭಾಗದಲ್ಲಿ ನಡೆಯುತ್ತಿರುವ ಗಲಾಟೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ನಗರದಲ್ಲಿ ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾದರೆ ಸುಮ್ಮನಿರಲ್ಲ. ಪ್ರತಿಭಟನೆ ನಡೆಸುವುದಾದರೆ ಉತ್ತರ ಭಾರತದಲ್ಲಿಯೇ ಹೋಗಿ ಭಾಗವಹಿಸಿ’ ಎಂದು ಗರಂ ಆಗಿ ಎಚ್ಚರಿಕೆ ನೀಡಿದ್ದಾರೆ.

‘ಪ್ರತಿಭಟನೆ ಮಾಡುವ ಪ್ರತಿಯೊಬ್ಬರ ವಿಡಿಯೊ ಚಿತ್ರೀಕರಣಕ್ಕೆ ಸೂಚನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಐಟಿ ಸೆಲ್ನಿಂದ ನಿಗಾ ವಹಿಸಲಾಗುವುದು’ ಎಂದೂಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.