ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಐಐಎಸ್‌ಸಿ: 19 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಕ್ಯಾಂಪಸ್‌ನಲ್ಲಿ 19 ಜನರಿಗೆ ಕೋವಿಡ್‌ ಪಾಸಿಟಿವ್‌ ದೃಢವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಜುಲೈ 31 ರಂದು ಪರೀಕ್ಷೆ ನಡೆಸಿದಾಗ 19 ಜನರಿಗೆ ಪಾಸಿಟಿವ್‌ ದೃಢವಾಗಿತ್ತು. ಅದಾಗಿ ಕೆಲ ದಿನಗಳ ಬಳಿಕ ಮರು ಪರೀಕ್ಷೆ ಮಾಡಿದಾಗ 15 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳಲ್ಲಿ ನೆಗೆಟಿವ್‌ ಬಂದಿದೆ. ಆದರೆ, ಹೊರಗಿನಿಂದ ಕ್ಯಾಂಪಸ್‌ಗೆ ಬರುವ ಸಿಬ್ಬಂದಿಯಲ್ಲಿ 34 ಜನರಿಗೆ ಪಾಸಿಟಿವ್‌ ಆಗಿತ್ತು ಎಂದು ಹೇಳಿದೆ.

ಬಿಬಿಎಂಪಿ ಹೊರಡಿಸಿದ ಮಾರ್ಗಸೂಚಿ ಅನ್ವಯ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳ ಹಾಸ್ಟೆಲ್‌ಗಳಲ್ಲಿ ಸ್ಯಾನಿಟೈಸ್‌ ಮಾಡಲಾಗಿದೆ. ಬಹುತೇಕ ವಿದ್ಯಾರ್ಥಿಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರದ ಅನ್‌ಲಾಕ್‌–3 ಮಾರ್ಗಸೂಚಿ ಪ್ರಕಾರ, ಮುನ್ನೆಚ್ಚರಿಕೆ ವಹಿಸಿ ಎಲ್ಲ ಪ್ರಯೋಗಾಲಯಗಳನ್ನು ತೆರೆಯಲಾಗಿದೆ. ಸಂಸ್ಥೆಯ ಎಲ್ಲ ಪ್ರವೇಶ ದ್ವಾರಗಳಲ್ಲೂ ಕಟ್ಟುನಿಟ್ಟಾದ ತಪಾಸಣೆ ನಡೆಸಲಾಗುತ್ತದೆ. ಗುರುತಿನ ಚೀಟಿ ಇದ್ದವರಿಗೆ ಮಾತ್ರ ಒಳಗೆ ಬಿಡಲಾಗುವುದು ಎಂದು ಪ್ರಕಟಣೆ  ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು