ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಕುಸಿದುಬಿದ್ದು ಐಐಎಸ್‌ಸಿ ಎಂ.ಟೆಕ್‌ ವಿದ್ಯಾರ್ಥಿ ಸಾವು

Published : 7 ಆಗಸ್ಟ್ 2024, 15:41 IST
Last Updated : 7 ಆಗಸ್ಟ್ 2024, 15:41 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ(ಐಐಎಸ್‌ಸಿ) ಎಂ.ಟೆಕ್‌ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಕುಸಿದುಬಿದ್ದು ಮೃತಪಟ್ಟಿದ್ದಾರೆ. 

ಮಹಾರಾಷ್ಟ್ರದ ಅವಿರಾಜ್‌ ಹನಮಂತ್‌ ಪವಾರ್‌(23) ಮೃತ ವಿದ್ಯಾರ್ಥಿ.

‘ಸಂಸ್ಥೆಯ ಹಾಸ್ಟೆಲ್‌ ಬ್ಲಾಕ್‌–2ರಲ್ಲಿ ನೆಲೆಸಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಂಗಳವಾರ ಮಧ್ಯಾಹ್ನ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದರು. ಸಂಸ್ಥೆಯ ಸಿಬ್ಬಂದಿ ಹಾಗೂ ಸಹಪಾಠಿಗಳು ಅವರನ್ನು ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ಧಾರೆ’ ಎಂದು ಮೂಲಗಳು ತಿಳಿಸಿವೆ.

‘ಮಹಾರಾಷ್ಟ್ರದಿಂದ ವಿದ್ಯಾರ್ಥಿಯ ಪೋಷಕರು ಬಂದಿದ್ದರು. ಕುಟುಂಬಸ್ಥರು ನೀಡಿದ ದೂರು ಆಧರಿಸಿ ಅಸಹಜ ಸಾವು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT