ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿಕಲಾ ಆಪ್ತೆ ಇಳವರಸಿಗೂ ಕೋವಿಡ್

Last Updated 23 ಜನವರಿ 2021, 19:22 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಪ್ರಮುಖರಾದ ವಿ.ಕೆ. ಶಶಿಕಲಾ ನಟರಾಜನ್‌ ಅವರ ಸಂಬಂಧಿ ಜೆ. ಇಳವರಸಿ ಅವರಿಗೂ ಕೋವಿಡ್‌ ಇರುವುದು ದೃಢಪಟ್ಟಿದೆ.

ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಇಲ್ಲಿನ ‍ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಇವರು ಕೂಡ ಶಶಿಕಲಾ ಅವರ ಜತೆಗೆ ಇದ್ದರು. ತೀವ್ರ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ, ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರವಾಗಿದ್ದ ಶಶಿಕಲಾ ಅವರು ಕೋವಿಡ್‌ ಪೀಡಿತರಾಗಿರುವುದು ಗುರುವಾರ ದೃಢಪಟ್ಟಿತ್ತು. ಈಗ ಅವರು ಕೋವಿಡ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಜೈಲಿನಲ್ಲಿ ಅವರ ಸಂಪರ್ಕಕ್ಕೆ ಇಳವರಸಿ ಅವರು ಬಂದಿದ್ದ ಕಾರಣ ಜೈಲು ಅಧಿಕಾರಿಗಳು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು, ಕೋವಿಡ್ ಪರೀಕ್ಷೆ ಮಾಡಿಸಿದ್ದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಿದ ಸಿಟಿ ಸ್ಕ್ಯಾನ್‌ನಲ್ಲಿ ಅವರು ಕೋವಿಡ್‌ ಪೀಡಿತರಾಗಿರುವುದು ದೃಢಪಟ್ಟಿದೆ. ಆದರೆ, ಅವರಿಗೆ ಕೋವಿಡ್‌ನ ಯಾವುದೇ ಲಕ್ಷಣಗಳು ಇರಲಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

‘ಶಶಿಕಲಾ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿದೆ. ಶ್ವಾಸಕೋಶದಲ್ಲಿ ಸೋಂಕು ಹೆಚ್ಚಾಗಿದ್ದ ಕಾರಣ ತುರ್ತು ನಿಗಾ ಘಟಕದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಹತ್ತು ದಿನಗಳ ನಂತರ ಮತ್ತೊಮ್ಮೆ ಕೋವಿಡ್ ಪರೀಕ್ಷೆ ನಡೆಸಲಾಗುವುದು. ಅಷ್ಟರಲ್ಲಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದು, ಕೋವಿಡ್‌ ಸೋಂಕು ಇಲ್ಲದಿರುವುದು ವರದಿಯಲ್ಲಿ ದೃಢಪಟ್ಟರೆ ಆಸ್ಪತ್ರೆಯಿಂದ ಕಳುಹಿಸಲಾಗುತ್ತದೆ’ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT