ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ನಟಿ ರಾಧಿಕಾ ಕುಮಾರಸ್ವಾಮಿ ಅವರ ವಿಚಾರಣೆ ನಡೆಸಿದ್ದಾರೆ. ಜಮೀರ್ ಅವರಿಗೆ ರಾಧಿಕಾ ₹2 ಕೋಟಿ ಹಣಕಾಸು ನೆರವು ನೀಡಿದ್ದರು ಎಂದು ಗೊತ್ತಾಗಿದ್ದು, ಈ ಸಂಬಂಧ ಅವರು ಹೇಳಿಕೆ ದಾಖಲಿಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು, ಜಮೀರ್ ಅಹಮದ್ ಖಾನ್ ಅವರ ಆದಾಯದ ಮೂಲಗಳನ್ನು ಶೋಧಿಸಿದಾಗ ಸಾಲ ನೀಡಿದವರ ಪಟ್ಟಿ ದೊರೆತಿದೆ. ಇದರಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಹಲವರ ಹೆಸರು ಉಲ್ಲೇಖವಾಗಿತ್ತು.

ವಿಚಾರಣೆ ವೇಳೆ ಜಮೀರ್ ಅವರಿಗೆ ಸಾಲ ಕೊಟ್ಟಿರುವುದನ್ನು ಒಪ್ಪಿಕೊಂಡಿರುವ ರಾಧಿಕಾ, ‘ನಾನು 2012ರಲ್ಲಿ ಯಶ್ ಹಾಗೂ ರಮ್ಯಾ ಅಭಿನಯದಲ್ಲಿ ಶಮಿಕಾ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಿನಿಮಾ ನಿರ್ಮಾಣ ಮಾಡಿದೆ. ಮನರಂಜನಾ ಚಾನಲ್ಗಳಿಗೆ ಈ ಸಿನಿಮಾದ ಸ್ಯಾಟಲೈಟ್ ಹಕ್ಕು ಹಾಗೂ ಚಲನಚಿತ್ರದ ಯಶಸ್ಸಿನಿಂದ ಸಂಪಾದಿಸಿದ ಹಣದಲ್ಲಿ ₹2 ಕೋಟಿ ಸಚಿವರಿಗೆ ನೀಡಿದ್ದೆ’ ಎಂದು ಹೇಳಿಕೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.