ಭಾನುವಾರ, ಜೂನ್ 26, 2022
26 °C

ಅಕ್ರಮ ಡಿನೋಟಿಫಿಕೇಶನ್‌ ಆರೋಪ | ಅನಾರೋಗ್ಯ: ಹಾಜರಿಗೆ ವಿನಾಯ್ತಿ ಕೋರಿದ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಕ್ರಮ ಡಿನೋಟಿಫಿಕೇಶನ್‌ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಅನಾರೋಗ್ಯದ ಕಾರಣ ನೀಡಿ ಖುದ್ದು ಹಾಜರಾತಿಗೆ ಇಲ್ಲಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಾತ್ಕಾಲಿಕವಾಗಿ ದಿನದಮಟ್ಟಿಗೆ ವಿನಾಯಿತಿ ನೀಡಿದೆ.

‘ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ವ್ಯಾಪ್ತಿಯಲ್ಲಿನ ಹಲವು ಜಮೀನುಗಳನ್ನು ಯಡಿಯೂರಪ್ಪನವರು 2006ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾನೂನು ಬಾಹಿರವಾಗಿ ಡಿನೋಟಿಫೈ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಾಸುದೇವ ರೆಡ್ಡಿ ಎಂಬುವರು ದಾಖಲಿಸಿರುವ ಖಾಸಗಿ ದೂರಿನ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ ಕುಮಾರ್ ಬುಧವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಾಜರಾಗಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, ‘ಯಡಿಯೂರಪ್ಪ ಅವರು ಕಳೆದ ಕೆಲವು ದಿನಗಳಿಂದ ಅತಿಯಾದ ಮಧುಮೇಹ, ಅಧಿಕ ರಕ್ತದೊತ್ತಡದಿಂದ  ಬಳಲುತ್ತಿದ್ದವರು ಚೇತರಿಸಿಕೊಂಡಿದ್ದರು. ಆದರೆ, ಈಗ ಮತ್ತೆ ಕಫ, ಶೀತ ಮತ್ತು ಜ್ವರದಿಂದ ಬಳಲುತ್ತಿದ್ದು ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದಾರೆ. ಆದ್ದರಿಂದ, ಖುದ್ದು ಹಾಜರಾತಿಗೆ ವಿನಾಯಿತಿ ನೀಡಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ದಿನದ ಹಾಜರಾತಿಗೆ ವಿನಾಯಿತಿ ನೀಡಿ ವಿಚಾರಣೆಯನ್ನು ಜೂನ್‌ 17ಕ್ಕೆ ಮುಂದೂಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು