ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಗುರುತಿನ ಚೀಟಿ | ತಪ್ಪಿತಸ್ಥರ ಮೇಲೆ ಕ್ರಮ: ತುಷಾರ್‌ ಗಿರಿನಾಥ್‌

Last Updated 18 ನವೆಂಬರ್ 2022, 21:33 IST
ಅಕ್ಷರ ಗಾತ್ರ

ಬೆಂಗಳೂರು: ‘ಸ್ವೀಪ್‌ ಚಟುವಟಿಕೆಯಲ್ಲಿ 2018ರಿಂದ ಮತದಾರರ ಪರಿಷ್ಕರಣೆ ಸಂದರ್ಭದಲ್ಲಿ ಚಿಲುಮೆ ಸಂಸ್ಥೆಗೆ ಅವಕಾಶ ನೀಡಲಾಗುತ್ತಿದೆ. ಅವರು ಮತಗಟ್ಟೆ ಅಧಿಕಾರಿ ಎಂದು ಗುರುತಿನ ಚೀಟಿ ಪಡೆದಿರುವುದು ತಪ್ಪು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

‘ಅಕ್ರಮವಾಗಿ ಗುರುತಿನ ಚೀಟಿ ಪಡೆದವರು ಹಾಗೂ ಗುರುತಿನ ಚೀಟಿ ನೀಡಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ನಮ್ಮ ಎಲ್ಲ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದು, ಅವರ ವರದಿ ಬಂದ ಮೇಲೆ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

‘ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಚೀಟಿಯೊಂದಿಗೆ ಆಧಾರ್‌ ಸಂಖ್ಯೆ ಜೋಡಣೆ ಕಡಿಮೆ ಪ್ರಮಾಣದಲ್ಲಿ ಇದ್ದುದರಿಂದ ಅರಿವು ಜೊತೆಗೆ ಅದನ್ನು ನಿರ್ವಹಿಸುತ್ತಿದ್ದರು. ಅವರು ಖಾಸಗಿಯಾಗಿ ಮಾಹಿತಿ ಪಡೆದಿರುವ ಬಗ್ಗೆ ಮಾಹಿತಿ ಇಲ್ಲ. ತನಿಖೆಯಿಂದ ಹೊರಬರುತ್ತದೆ. ಚಿಲುಮೆ ಸಂಸ್ಥೆಯೊಂದಕ್ಕೆ ಮಾತ್ರ ಅರಿವು ಮೂಡಿಸುವ ಅನುಮತಿ ನೀಡಲಾಗಿತ್ತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT