ಶುಕ್ರವಾರ, ಮೇ 20, 2022
19 °C

ಕೇರಳಕ್ಕೆ ಅಕ್ರಮ ಮದ್ಯ ಸಾಗಾಟ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರಿನಿಂದ ಕೇರಳಕ್ಕೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ದಂಡು ರೈಲ್ವೆ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದ ಸುಕಂತ ದಾಸ್ (36) ಬಂಧಿತ ಆರೋಪಿ.

‘ರೈಲ್ವೆ ನಿಲ್ದಾಣದ ಫ್ಲಾಟ್‌ಫಾರ್ಮ್‌ ಎರಡರಲ್ಲಿ ಈತ ಚೀಲಗಳನ್ನು ಹಿಡಿದು ನಿಂತಿದ್ದ. ಅನುಮಾನದಿಂದ ವಿಚಾರಣೆ ನಡೆಸಿದಾಗ ಚೀಲದಲ್ಲಿ ಮದ್ಯ ಬಾಟಲಿಗಳು ಪತ್ತೆಯಾದವು’ ಎಂದು ಪೊಲೀಸರು ತಿಳಿಸಿದರು.

‘ಆರೋಪಿ ಜಕ್ಕೂರಿನ ಮದ್ಯದಂಗಡಿಯಿಂದ ಮದ್ಯದ ಬಾಟಲಿಗಳನ್ನು ಖರೀದಿಸಿದ್ದ. ಲಾಕ್‌ಡೌನ್‌ನಿಂದಾಗಿ ಬೇಡಿಕೆ ಇರುವ ಕಾರಣಕ್ಕೆ ಕೇರಳದಲ್ಲಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಯೋಜಿಸಿದ್ದ. ಇದಕ್ಕಾಗಿ ಬೆಂಗಳೂರಿನಿಂದ ತಿರುವನಂತಪುರಕ್ಕೆ ತೆರಳುವ ರೈಲು ಹತ್ತಲು ದಂಡು  ನಿಲ್ದಾಣಕ್ಕೆ ಬಂದಿದ್ದ’ ಎಂದೂ ಹೇಳಿದರು. 

‘ಆರೋಪಿಯಿಂದ ₹26,433 ಮೌಲ್ಯದ ಒಟ್ಟು 77 ಮದ್ಯದ ಬಾಟಲಿಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು