ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ವರು ಅಕ್ರಮ ವಲಸಿಗರ ಬಂಧನ

Published 18 ಏಪ್ರಿಲ್ 2024, 16:54 IST
Last Updated 18 ಏಪ್ರಿಲ್ 2024, 16:54 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ವಿವಿಧೆಡೆ ಭಿಕ್ಷಾಟನೆ ನಡೆಸುತ್ತಿದ್ದ ನಾಲ್ವರು ಅಕ್ರಮ ವಲಸಿಗರನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಗುರುವಾರ ಬಂಧಿಸಿ‌ದ್ದಾರೆ.

ಶಮೀಮ್‌ ಅಹಮದ್, ನೂರ್‌ಜಾನ್, ಅಬ್ದುಲ್‌ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

‘ಠಾಣಾ ವ್ಯಾಪ್ತಿಯ ಬಿಸ್ಮಿಲಾನಗರದಲ್ಲಿ ನಾಲ್ವರು ಭಿಕ್ಷಾಟನೆ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಎಲ್ಲರೂ ಬಾಂಗ್ಲಾ ವಲಸಿಗರೆಂದು ವಿಚಾರಣೆಯಿಂದ ಗೊತ್ತಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಐದು ದಿನಗಳ ಕಾಲ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT