ಬೆಂಗಳೂರು: ‘ಅಕ್ರಮ ಗಣಿಗಾರಿಕೆ ನಡೆಸಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಆರೋಪದಿಂದ ನನ್ನನ್ನು ಕೈಬಿಡಬೇಕು’ ಎಂದು ಕೋರಿದ್ದ ಜಿ. ಜನಾರ್ದನ ರೆಡ್ಡಿ ಅರ್ಜಿಯನ್ನು ಜನಪ್ರತಿ ನಿಧಿಗಳ ಕೋರ್ಟ್ ವಜಾ ಮಾಡಿದೆ.

ಈ ಕುರಿತ ಆದೇಶವನ್ನು, ‘ಶಾಸಕರು –ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಪ್ರಕಟಿಸಿದ್ದಾರೆ. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಕೆ.ಎಂ.ಅಲಿಖಾನ್ ಮತ್ತು ಬಿ.ವಿ.ಶ್ರೀನಿವಾಸ ರೆಡ್ಡಿ ಅವರ ಅರ್ಜಿಗಳನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ.

‘ಆರೋಪಿಗಳು ಅದಿರು ಕಳುವಿನ ಬಗ್ಗೆ ಸಂಚು, ಅಪರಾ–ತಪರಾ, ಮೋಸ ಎಸಗಿರುವುದು ಮೇಲ್ನೋಟಕ್ಕೆ ವೇದ್ಯವಾ ಗುತ್ತದೆ. ಹೀಗಾಗಿ ಆರೋಪಿಗಳ ವಿರುದ್ಧ ವಿಚಾರಣೆ ನಡೆಸುವುದು ಅವಶ್ಯವಿದೆ. ಆದ್ದರಿಂದ ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಲಿ’ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಆರೋಪಿಗಳು ಎಂ.ನಾಶಿಕ್ ಸಾಬ್ ಅವರಿಗೆ ಸೇರಿದ, ‘ಮೆಸರ್ಸ್ ಇಂಡಿಯನ್ ಮೈನ್ಸ್ ಕಂಪನಿ’ಯನ್ನು ವಶಕ್ಕೆ ಪಡೆದು ಆ ಕಂಪನಿಯ ಹೆಸರಿ ನಲ್ಲಿ ಮಿತಿಗಿಂತಲೂ ಹೆಚ್ಚಿನ ಕಬ್ಬಿಣದ ಅದಿರನ್ನು ತೆಗೆದು ಸಾಗಣೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.