ಸೋಮವಾರ, ಜನವರಿ 24, 2022
28 °C
ಕೆಜಿ ಜಾಜೂರಿನಲ್ಲಿ ಅಕ್ರಮ ಗಣಿಗಾರಿಕೆ ದೂರು, ಅಧಿಕಾರಿಗಳಿಂದ ಪರಿಶೀಲನೆ

ಕೆಜಿ ಜಾಜೂರಿನಲ್ಲಿ ಅಕ್ರಮ ಗಣಿಗಾರಿಕೆ ದೂರು: ಸ್ಫೋಟ ಮಾಡದಂತೆ ತಾತ್ಕಾಲಿಕ ತಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಬಸ್ ಪೇಟೆ: ಕೆಜಿ ಜಾಜೂರಿನಲ್ಲಿ ಕಲ್ಲು ಕ್ವಾರಿಗಳಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಸ್ಫೋಟ ನಡೆಸುವುದರಿಂದ ಗ್ರಾಮದ ಮನೆಗಳು ಬಿರುಕು ಬಿಟ್ಟಿವೆ ಎಂದು ಸಾರ್ವಜನಿಕರಿಂದ ದೂರಿದ್ದಾರೆ.

ನರಸೀಪುರ ಗ್ರಾಮ ಪಂಚಾಯಿತಿ ಅಧಿಕಾರಿ ಉಮಾಶಂಕರ್ ಹಾಗೂ ಪಂಚಾಯತಿ ಸದಸ್ಯರು ಈ ದೂರಿನ ಆಧಾರದಲ್ಲಿ ಕ್ರಷರ್ ಮೇಲೆ ದಾಳಿ ನಡೆಸಿದರು.

ಕ್ರಷರ್ ನಡೆಸಲು ಇಲಾಖೆಯಿಂದ ಅನುಮತಿ ಪಡೆದ ದಾಖಲೆ ನೀಡುವವರೆಗೆ ಸ್ಫೋಟ ಹಾಗೂ ಗಣಿಗಾರಿಕೆ ನಡೆಸದಂತೆ ಕ್ವಾರಿ ಮಾಲೀಕರಿಗೆ ಸೂಚನೆ ನೀಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ, ನೆಲಮಂಗಲ ತಾಲೂಕು ನರಸೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಜಿ ಜಾಜೂರು ಗ್ರಾಮದ ಸರ್ವೇ ನಂಬರ್ 22ರಲ್ಲಿ ಎಸ್ಎಲ್ಆರ್ ಸ್ಟೋನ್ ಕ್ರಷರ್ ಸಂಸ್ಥೆಯವರು ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದಾರೆ ಮತ್ತು ಸ್ಫೋಟ ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ನರಸೀಪುರ ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು.

'ಕಲ್ಲು ಸ್ಪೋಟ ನಡೆಸುತ್ತಿರುವುದರಿಂದ ಗ್ರಾಮದ ರೈತರಿಗೆ ಮತ್ತು ಮನೆಗಳಿಗೆ ಹಾನಿಯಾಗುತ್ತಿದೆ. ಇದರ ಬಗ್ಗೆ ಪಂಚಾಯಿತಿಗೆ ದೂರು ನೀಡಿದ್ದೇವೆ. ಕ್ರಷರ್ ವಿರುದ್ಧ ಕ್ರಮ ಕೈಗೊಳ್ಳಬೇಕು' ಎಂದು ಸ್ಥಳೀಯರಾದ ಸಂಪತ್ ಕುಮಾರ್ ಒತ್ತಾಯಿಸಿದರು.

‘ಸಾರ್ವಜನಿಕರ ದೂರಿನ ಆಧಾರದ ಮೇಲೆ ಕ್ರಷರ್ ಜಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ.ಕ್ರಷರ್ ನಡೆಸಲು ಪಡೆದ  ಪರವಾನಗಿಯನ್ನು ಮಾಲೀಕರು ಹಾಜರು ಪಡಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿದ್ದೇವೆ’ ಎಂದು ಪಿಡಿಒ ಉಮಾಶಂಕರ್ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು