ಗುರುವಾರ , ಮಾರ್ಚ್ 30, 2023
24 °C

ಅಕ್ರಮ ಧಾರ್ಮಿಕ ಕಟ್ಟಡ: ಪ್ರಮಾಣಪತ್ರ ಸಲ್ಲಿಸಲು ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಾರ್ವಜನಿಕ ಜಾಗದಲ್ಲಿರುವ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಪಾಲನೆ ಮಾಡಿರುವ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

277 ಕಟ್ಟಡಗಳಲ್ಲಿ ಮೂರು ಕಟ್ಟಡಗಳನ್ನು ಮಾತ್ರ ತೆರವುಗೊಳಿಸಲಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಸಮಾಧಾನ ವ್ಯಕ್ತಪಡಿಸಿತು.

‘ಹಲವು ಬಾರಿ ನಿರ್ದೇಶನಗಳನ್ನು ನೀಡಿದ್ದರೂ, ಸುಪ್ರೀಂ ಕೋರ್ಟ್ ಆದೇಶಗಳಿಗೆ ಅನುಸಾರವಾಗಿ ಬಿಬಿಎಂಪಿ ಕ್ರಮಗಳನ್ನು ಅನುಸರಿಸಿಲ್ಲ’ ಎಂದು ಹೇಳಿದ ಪೀಠ, ಖುದ್ದು ಪರಿಶೀಲನೆ ನಡೆಸಿ ಆಗಸ್ಟ್ 10ರೊಳಗೆ ಪ್ರಮಾಣಪತ್ರ ಸಲ್ಲಿಸುವಂತೆ ಪಾಲಿಕೆಯ ಮುಖ್ಯ ಆಯುಕ್ತರಿಗೆ ಆದೇಶಿಸಿತು.

ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ ವಿಚಾರಣೆ ನಡೆಸುತ್ತಿರುವ ಪೀಠ, ರಾಜ್ಯದಾದ್ಯಂತ ಇರುವ ಅಕ್ರಮ ಧಾರ್ಮಿಕ ಕಟ್ಟಡಗಳ ತೆರವು ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೂ ನಿರ್ದೇಶನ ನೀಡಿತು. ವಿಚಾರಣೆಯನ್ನು ಆ.12ಕ್ಕೆ ಮುಂದೂಡಿತು.

ಸರ್ಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಎಲ್ಲ ರಾಜ್ಯ ಸರ್ಕಾರಗಳಿಗೆ 2009ರಲ್ಲಿ ಆದೇಶ ನೀಡಿತ್ತು. ಈ ಆದೇಶ ಪಾಲನೆ ಸಂಬಂಧ ಸ್ವಯಂಪ್ರೇರಿತವಾಗಿ ಮೇಲುಸ್ತುವಾರಿ ವಹಿಸುವಂತೆ ಹೈಕೋರ್ಟ್‌ಗಳಿಗೆ 2018ರಲ್ಲಿ ನಿರ್ದೇಶನ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು