ಗುರುವಾರ , ಜೂನ್ 17, 2021
29 °C

ಕಾಳಸಂತೆಯಲ್ಲಿ ಆಮ್ಲಜನಕ ಸಿಲಿಂಡರ್‌ ಮಾರಾಟ; ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಮ್ಲಜನಕ ಸಿಲಿಂಡರ್‌ ಹಾಗೂ ಆಮ್ಲಜನಕ ಸಾಂದ್ರೀಕರಣ ಸಾಧನವನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಎಸ್‌.ಬಿ. ಮಂಜುನಾಥ್ (27), ರಾಜ್‌ಕುಮಾರ್ (30) ಹಾಗೂ ಅನಿಲ್ ಕುಮಾರ್ (39) ಬಂಧಿತರು. ಅವರಿಂದ ₹5 ಲಕ್ಷ ಮೌಲ್ಯದ 2 ಆಮ್ಲಜನಕ ಸಿಲಿಂಡರ್, 1 ಆಮ್ಲಜನಕ ಸಾಂದ್ರೀಕರಣ ಸಾಧನ,  ಮೂರು ಮೊಬೈಲ್ ಹಾಗೂ ಕಾರು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ಚಾಮರಾಜಪೇಟೆಯಲ್ಲಿರುವ ಸಿಗಾ ಗ್ಯಾಸ್ ಕಂಪನಿ ಸಿಬ್ಬಂದಿ ನವೀನ್ ಎಂಬಾತನ ಜೊತೆ ಒಡನಾಟ ಹೊಂದಿದ್ದ ಆರೋಪಿಗಳು, ಆತನ ಮೂಲಕ ಆಮ್ಲಜನಕ ಖರೀದಿಸುತ್ತಿದ್ದರು. ಅದನ್ನು ಕೊರೊನಾ ಸೋಂಕಿತರಿಗೆ ಹಾಗೂ ಅವರ ಸಂಬಂಧಿಕರಿಗೆ ದುಬಾರಿ ಬೆಲೆಗೆ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು