ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ರೆಮ್‌ಡಿಸಿವಿರ್ ಅಕ್ರಮ ಮಾರಾಟ: ಆರು ಮಂದಿ ಬಂಧನ

ಉತ್ತರ ವಿಭಾಗ ಪೊಲೀಸರ ಕಾರ್ಯಾಚರಣೆ
Last Updated 6 ಮೇ 2021, 6:26 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರಿಗೆ ನೀಡುವ ರೆಮ್‌ಡಿಸಿವಿರ್ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಐದು ಸ್ಥಳಗಳ ಮೇಲೆ ಉತ್ತರ ವಿಭಾಗದ ಪೊಲೀಸರು ದಾಳಿ ಮಾಡಿದ್ದು, ಆರು ಮಂದಿಯನ್ನು ಬಂಧಿಸಿದ್ದಾರೆ.

‘ವಿಭಾಗ ವ್ಯಾಪ್ತಿಯ ಹಲವೆಡೆ ಅಕ್ರಮವಾಗಿ ರೆಮ್‌ಡಿಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಅದನ್ನು ಆಧರಿಸಿ ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ದಾಳಿ ಮಾಡಿವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೊರೊನಾ ಸೋಂಕಿತರು, ಅವರ ಸಂಬಂಧಿಕರನ್ನು ಏಜೆಂಟರು ಹಾಗೂ ಆಸ್ಪತ್ರೆಯವರ ಮೂಲಕ ಸಂರ್ಪಕಿಸುತ್ತಿದ್ದ ಆರೋಪಿಗಳು, ಸರ್ಕಾರದ ದರಕ್ಕಿಂತ ಹೆಚ್ಚಿನ ದರಕ್ಕೆ ಚುಚ್ಚುಮದ್ದು ಮಾರುತ್ತಿದ್ದರು’ ಎಂದೂ ತಿಳಿಸಿದರು.

ಆರೋಪಿಗಳಿಂದ 25 ಬಾಟಲಿ ಚುಚ್ಚುಮದ್ದು ಜಪ್ತಿ ಮಾಡಲಾಗಿದೆ. ರೆಮ್‌ಡಿಸಿವಿರ್ ಚುಚ್ಚುಮದ್ದು ಸಿಗುತ್ತದೆ ಎಂಬ ಸಂದೇಶವನ್ನು ಆರೋಪಿಗಳು, ವಾಟ್ಸ್‌ಆ್ಯಪ್, ಫೇಸ್‌ಬುಕ್‌ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ಹಾಕುತ್ತಿದ್ದರು. ಕೊರೊನಾ ಸೋಂಕಿತರಿಗೆ ಚುಚ್ಚುಮದ್ದು ಬೇಕೆಂದು ಹೇಳಿ ಸಂಬಂಧಿಕರ ಸೋಗಿನಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದೂ ಹೇಳಿದರು.

ಸಿಸಿಬಿಯಿಂದ ಇಬ್ಬರ ಬಂಧನ: ನಗರದ ಸಿಸಿಬಿ ಪೊಲೀಸರು ಸಹ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಅವರಿಂದ 12 ಚುಚ್ಚುಮದ್ದುಗಳನ್ನು ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT