ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಧಾರ್ಮಿಕ ಶ್ರದ್ಧಾ ಕೇಂದ್ರ ತೆರವಿಗೆ ನಿಯಮ

Last Updated 2 ಜುಲೈ 2019, 19:21 IST
ಅಕ್ಷರ ಗಾತ್ರ

ಬೆಂಗಳೂರು: ‘ಶಾಲೆ, ಉದ್ಯಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾಗಿರುವ ದೇವಸ್ಥಾನ, ಚರ್ಚ್, ಮಸೀದಿ, ಗುರುದ್ವಾರ ಹಾಗೂ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವಿಗೆ ರಾಜ್ಯ ಸರ್ಕಾರ ಶೀಘ್ರವೇ ಸೂಕ್ತ ನಿಯಮಗಳನ್ನು ರೂಪಿಸಲಾಗುವುದು‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ ಅವರು, ‘2009ರ ಸೆಪ್ಟೆಂಬರ್‌ 29ರಂದು ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಈಗಾಗಲೇ ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ನಡೆಸಿತ್ತು. ಆದರೆ, ಮಧ್ಯದಲ್ಲಿ ಈ ಪ್ರಕ್ರಿಯೆ ಕುಂಠಿತಗೊಂಡಿತ್ತು’ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಈವರೆಗೂ ಕೈಗೊಂಡಿರುವ ಕ್ರಮಗಳೇನು, ರಾಜ್ಯದಾದ್ಯಂತ ಎಷ್ಟು ಅನಧಿಕೃತ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಗುರುತಿಸಲಾಗಿದೆ ಮತ್ತು 2009ರ ನಂತರ ನಿರ್ಮಿಸಲಾದ ಅಕ್ರಮ ಕಟ್ಟಡಗಳಲ್ಲಿ ಎಷ್ಟನ್ನು ತೆರವುಗೊಳಿಸಿದ್ದೀರಿ ಎಂಬ ಬಗ್ಗೆ ಮುಂದಿನ ಆರು ವಾರಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಿ’ ಎಂದು ನಿರ್ದೇಶಿಸಿದರು.

ಮೊದಲಿನ ಸ್ಥಿತಿಗೆ ತನ್ನಿ: ‘ಮಾಗಡಿ ರಸ್ತೆಯ ಪೊಲೀಸ್ ವಸತಿ ನಿಲಯ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಸಾಯಿಬಾಬಾ ದೇವಸ್ಥಾನದ ಪ್ರದೇಶವನ್ನು ಮೊದಲಿದ್ದ ಸ್ಥಿತಿಗೆ ತನ್ನಿ’ ಎಂದೂ ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT