ಮಂಗಳವಾರ, ಮಾರ್ಚ್ 21, 2023
20 °C

ನನಗೆ ಹೇಳದೇ ಬಂಧಿಸಿದ್ದಕ್ಕೆ ಬೇಸರವಾಗಿದೆ: ಸಚಿವ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜಣ್ಣ ನನಗೆ ಗೊತ್ತಿರುವ ಹುಡುಗ. ನನಗೆ ಹೇಳದೇ ಆತನನ್ನು ಬಂಧಿಸಿದ್ದಕ್ಕೆ ಬೇಸರವಾಗಿದೆ. ಆದರೆ, ಅಸಮಾಧಾನ ಇಲ್ಲ’ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಆತನ ಬಂಧನದ ವಿಚಾರವನ್ನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಯಾರೂ ಕೂಡ ಬೇರೆ ಯಾರದ್ದೇ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು. ಅದು ತಪ್ಪು’ ಎಂದು ಹೇಳಿದರು.

‘ತನಿಖೆ ನಡೆಯುವ ಸಮಯದಲ್ಲಿ ನಾನು ಮಾತನಾಡುವುದು ಸರಿಯಲ್ಲ. ತನಿಖೆ ನಡೆದು ಕಾನೂನು ಪ್ರಕಾರ ಶಿಕ್ಷೆ ಆಗುತ್ತದೆ. ವಿಜಯೇಂದ್ರ ಮತ್ತು ಮುಖ್ಯಮಂತ್ರಿಯವರ ಜತೆಗೆ ಮಾತನಾಡುತ್ತೇನೆ. ವಿಜಯೇಂದ್ರ ಅವರು ನನ್ನ ಬಳಿ ಹೇಳಿದ್ದರೆ, ಕೂರಿಸಿ ವಿಚಾರಿಸುತ್ತಿದ್ದೆ’ ಎಂದರು.

‘ರಾಜಣ್ಣ  ನನ್ನ ಬಳಿ ಅಧಿಕೃತವಾಗಿ ಯಾವುದೇ ಕೆಲಸ ಮಾಡುತ್ತಿರಲಿಲ್ಲ. ನಾನು ತಪ್ಪಿತಸ್ಥರನ್ನು ಕಾಪಾಡುವ ವ್ಯಕ್ತಿಯಲ್ಲ. ಈ ಬೆಳವಣಿಗೆಯಿಂದ ನೋವಾಗಿದೆ’ ಎಂದು ರಾಮುಲು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು