ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ ಮುಂದೆ ಹಾಜರಾದ ಜಮೀರ್‌

Last Updated 19 ಸೆಪ್ಟೆಂಬರ್ 2019, 20:17 IST
ಅಕ್ಷರ ಗಾತ್ರ

ಬೆಂಗಳೂರು:‘ಐಎಂಎ ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್‌ ಖಾನ್‌ ಅವರ ಜೊತೆ ಹಣಕಾಸು ವ್ಯವಹಾರ ನಡೆಸಿದ ಆರೋಪಕ್ಕೆ ಒಳಗಾಗಿರುವ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ಸುದೀರ್ಘ ವಿಚಾರಣೆಗೆ ಒಳಪಡಿಸಿದರು.

ಮನ್ಸೂರ್‌ ಖಾನ್‌ ಒಡೆತನದ ಕಂಪನಿಯ ವಂಚನೆ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು, ಜಮೀರ್‌ ಅವರಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದರು. ಕೆಲವು ಪ್ರಶ್ನೆಗಳನ್ನು ಕೇಳಿದಾಗ ಅವರು ಗೊಂದಲಕ್ಕೆ ಒಳಗಾದರು ಎಂದು ಉನ್ನತ ಮೂಲಗಳು ತಿಳಿಸಿವೆ.

ರಿಚ್ಮಂಡ್‌ ಟೌನ್‌ನ ಸರ್ಪಂಟೈನ್‌ ರಸ್ತೆಯಲ್ಲಿರುವ ನಿವೇಶನವೊಂದನ್ನು ಜಮೀರ್‌ ಅಹಮದ್‌ ಖಾನ್‌ 2017ರ ಡಿಸೆಂಬರ್‌ನಲ್ಲಿ ಮನ್ಸೂರ್ ಖಾನ್‌ಗೆ ಮಾರಾಟ ಮಾಡಿದ್ದಾರೆ.

‘ಈ ವ್ಯವಹಾರ ಅತ್ಯಂತ ಪಾರದಶರ್ಕವಾಗಿದೆ. ಆರ್‌ಟಿಜಿಎಸ್‌ ಮೂಲಕ ಹಣ ಪಾವತಿಸಲಾಗಿದೆ’ ಎಂದೂ ಜಮೀರ್‌ ತಿಳಿಸಿದ್ದಾರೆ. ಆದರೆ, ತೆರೆಮರೆಯಲ್ಲಿ ಹೆಚ್ಚು ಹಣ ಪಾವತಿಸಲಾಗಿದೆ’ ಎಂದು ಮನ್ಸೂರ್‌ ವಿಚಾರಣೆ ವೇಳೆ ನೀಡಿರುವ ಹೇಳಿಕೆಯಿಂದ ಜಮೀರ್‌ ಅವರನ್ನುಸಿಬಿಐ ವಿಚಾರಣೆಗೆ ಒಳಪಡಿಸಿತ್ತು.

‘ತಾವು ಮನ್ಸೂರ್ ಖಾನ್‌ ಅವರ ಜತೆ ನಡೆಸಿದ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಲು ಸಿದ್ಧ. ಈಗಾಗಲೇ ಜಾರಿ ನಿರ್ದೇಶನಾಲಯ ತಮ್ಮ ವಿಚಾರಣೆ ನಡೆಸಿದೆ. ಅದಕ್ಕೂ ದಾಖಲೆ ನೀಡಿದ್ದೇನೆ. 2018ರ ವಿಧಾನಸಭೆ ಚುನಾವಣೆ ಸಮಯದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪ್ರಮಾಣ ಪತ್ರ ಹಾಗೂ ಲೋಕಾಯುಕ್ತ ಸಲ್ಲಿಸಿರುವ ಆಸ್ತಿ ವಿವರದಲ್ಲೂ ನಿವೇಶನ ಮಾರಾಟ ಕುರಿತು ಪ್ರಸ್ತಾಪಿಸಿದ್ದೇನೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಜಮೀರ್‌ಗೆ ಮನ್ಸೂರ್‌ ಅಕ್ರಮವಾಗಿ ಹಣ ನೀಡಿದ್ದಾರೆಯೇ ಎಂಬ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT