ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಂಎ ವಂಚನೆಗೊಳಗಾದವರಿಗೆ ಹಣ ಪಾವತಿ: ಅರ್ಜಿ ಸಲ್ಲಿಸಲು ಜ.3ರವರೆಗೂ ಅವಕಾಶ

Last Updated 26 ಡಿಸೆಂಬರ್ 2020, 20:49 IST
ಅಕ್ಷರ ಗಾತ್ರ

ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಕಂಪನಿಯ ಪ್ರಕರಣದಲ್ಲಿ ವಂಚನೆಗೊಳಗಾಗಿರುವ ಹೂಡಿಕೆದಾರರು ಹಣ ವಾಪಸ್‌ ಪಡೆಯಲು ಸಕ್ಷಮ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಧಿಯನ್ನು 2021ರ ಜನವರಿ 3ವರೆಗೂ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ನವೆಂಬರ್‌ 25ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಡಿಸೆಂಬರ್‌ 24 ಕೊನೆಯ ದಿನವಾಗಿತ್ತು. ಡಿ.23ರಂದು ವಿಶೇಷ ನ್ಯಾಯಾಲಯ ನೀಡಿರುವ ಆದೇಶದಂತೆ ಅರ್ಜಿ ಸಲ್ಲಿಕೆ ಅವಧಿಯನ್ನು ಜ.3ರವರೆಗೂ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಹೂಡಿಕೆದಾರರ ಹಿತಾಸಕ್ತಿ ಸಂರಕ್ಷಣೆ ಕಾಯ್ದೆ (ಕೆಪಿಐಡಿ)ಯಡಿ ನೇಮಕಗೊಂಡಿರುವ ಸಕ್ಷಮ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ. ಹೂಡಿಕೆದಾರರು ತಮ್ಮ ಬ್ಯಾಂಕ್‌ ಖಾತೆ, ಆಧಾರ್‌ ಸಂಖ್ಯೆ ವಿವರ ಮತ್ತಿತರ ದಾಖಲೆಗಳೊಂದಿಗೆ ‘imaclaims.karnataka.gov.in’ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080–46885959ಗೆ ಬೆಳಿಗ್ಗೆ 8ರಿಂದ ರಾತ್ರಿ 8ರ ಅವಧಿಯಲ್ಲಿ ಕರೆ ಮಾಡಬಹುದು. ವಾಟ್ಸ್‌ ಆ್ಯಪ್‌ ಸಂಖ್ಯೆ 79755 68880 ಮೂಲಕವೂ ಮಾಹಿತಿ ಪಡೆಯಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT