ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ದಾಖಲೆ ಇದ್ದರೆ ಎಸ್‌ಐಟಿಗೆ ನೀಡಿ’

Last Updated 13 ಆಗಸ್ಟ್ 2019, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮೊಹಮದ್‌ ಮನ್ಸೂರ್ ಖಾನ್‌ ವಿದೇಶಕ್ಕೆ ಪರಾರಿಯಾಗಲು ಸಿಐಡಿ ಐಜಿಪಿ ಆಗಿದ್ದ ಹೇಮಂತ್‌ ನಿಂಬಾಳ್ಕರ್‌ ಸಹಕರಿಸಿದ್ದಾರೆ ಎಂಬ
ಬಗ್ಗೆ ದಾಖಲೆಗಳಿದ್ದರೆ ಅವುಗಳನ್ನು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ನೀಡಿ’ ಎಂದು ಹೈಕೋರ್ಟ್‌ ಅರ್ಜಿದಾರರಿಗೆ ನಿರ್ದೇಶಿಸಿದೆ.

ಈ ಕುರಿತಂತೆ ‘ಜನಾಧಿಕಾರ ಸಂಘರ್ಷ ಪರಿಷತ್‌’ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಲೇವಾರಿ ಮಾಡಿತು.

‘ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಜನವರಿ 18ರಂದು ಸಲ್ಲಿಸಿದ್ದ ತನಿಖಾ ವರದಿಯಿಂದಾಗಿ ಮನ್ಸೂರ್ ಖಾನ್ ವಿದೇಶಕ್ಕೆ ಪರಾರಿಯಾಗಲು ಸಹಕಾರಿಯಾಯಿತು. ಆದ್ದರಿಂದ ಈ ಸಂಬಂಧ ಹೇಮಂತ್ ನಿಂಬಾಳ್ಕರ್ ಅವರನ್ನೂ ವಿಚಾರಣೆಗೆ
ಗುರಿಪಡಿಸಲು ಎಸ್‌ಐಟಿಗೆ ನಿರ್ದೇಶನ ನೀಡಬೇಕು’ ಎಂದು ಅರ್ಜಿದಾರರು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT