ಭಾನುವಾರ, ಏಪ್ರಿಲ್ 11, 2021
33 °C
ಐಎಂಎ ಸಮೂಹ ಕಂಪನಿ ವಂಚನೆ ಹಗರಣ

ಜಯದೇವ ಆಸ್ಪತ್ರೆಗೆ ಮನ್ಸೂರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಐಎಂಎ ಸಮೂಹ’ ಕಂಪನಿ ಮಾಲೀಕ ಮನ್ಸೂರ್ ಖಾನ್‌, ‘ಎದೆ ನೋಯುತ್ತಿದೆ’ ಎಂದು ನರಳಾಡಿದ್ದರಿಂದಾಗಿ ಭಾನುವಾರ ಜಯದೇವ ಆಸ್ಪತ್ರೆಗೆ ಕರೆತಂದು ತಪಾಸಣೆಗೆ ಒಳಪಡಿಸಲಾಯಿತು.

ಮನ್ಸೂರ್ ಖಾನ್‌ ಅವರನ್ನು ಕಸ್ಟಡಿಗೆ ಪಡೆದಿರುವ ಇ.ಡಿ ಅಧಿಕಾರಿಗಳು, ಅಜ್ಞಾತ ಸ್ಥಳದಲ್ಲಿಟ್ಟು ವಿಚಾರಣೆ ನಡೆಸುತ್ತಿದ್ದಾರೆ. ‘ಎದೆ ನೋವು ಕಾಣಿಸಿಕೊಂಡಿದೆ’ ಎಂದು ನರಳಲು ಆರಂಭಿಸಿದ್ದ ಆರೋಪಿ, ‘ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ಪಟ್ಟು ಹಿಡಿದಿದ್ದರು.

ಕೂಡಲೇ ಇ.ಡಿ ಅಧಿಕಾರಿಗಳು, ಮನ್ಸೂರ್ ಖಾನ್‌ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದರು. ತಪಾಸಣೆ ನಡೆಸಿದ ವೈದ್ಯರು, ‘ಯಾವುದೇ ತೊಂದರೆ ಕಾಣಿಸುತ್ತಿಲ್ಲ’ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಇ.ಡಿ ಅಧಿಕಾರಿಗಳು, ಅವರನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಪಡಿಸಿದರು. ತಡರಾತ್ರಿವರೆಗೂ ಖಾನ್ ಅವರ ಆರೋಗ್ಯ ತಪಾಸಣೆ ಪ್ರಕ್ರಿಯೆ ನಡೆಯಿತು.

‘ವಿಚಾರಣೆಯಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಆರೋಪಿ, ಎದೆನೋವು ಎಂದು ನಾಟಕವಾಡುತ್ತಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಜಯದೇವ ಆಸ್ಪತ್ರೆಗೆ ಕರೆತರಲಾಗಿದೆ. ವೈದ್ಯರ ವರದಿಯ ಬಳಿಕ ನಿಜಾಂಶ ತಿಳಿಯಲಿದೆ’ ಎಂದು ಮೂಲಗಳು ಹೇಳಿವೆ.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು