ಶನಿವಾರ, ಸೆಪ್ಟೆಂಬರ್ 25, 2021
29 °C

ಐಎಂಎ ಹಗರಣ | ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ‌ ಇ.ಡಿ ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಶಾಸಕ ಬಿ.ಜೆಡ್. ಜಮೀರ್ ಅಹಮ್ಮದ್ ಖಾನ್ ಅವರ ಮನೆ, ಕಚೇರಿಗಳ‌ ಮೇಲೆ ಗುರುವಾರ ಬೆಳಿಗ್ಗೆಯೇ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ಶಿವಾಜಿನಗರ ವ್ಯಾಪ್ತಿಯ ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಜಮೀರ್ ಅವರ ಮನೆ, ಚಾಮರಾಜಪೇಟೆಯಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಜಮೀರ್ ಒಡೆತನದ ಫ್ಲ್ಯಾಟ್ ಸೇರಿದಂತೆ ಹಲವು ಕಡೆಗಳಲ್ಲಿ ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.

ಐಎಂಎ ಹಗರಣದಲ್ಲಿನ ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಜಮೀರ್ ಮತ್ತು ಮಾಜಿ ಸಚಿವ ರೋಷನ್ ಬೇಗ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಇ.ಡಿ‌ ದಾಳಿ ನಡೆದಿದೆ.

ಬೆಳಿಗ್ಗೆ ಆರು ಗಂಟೆ ಸುಮಾರಿಗೆ ದಾಳಿ ಆರಂಭವಾಗಿದೆ. ದಾಖಲೆ ಪತ್ರಗಳ ತಪಾಸಣೆ ನಡೆಯುತ್ತಿದೆ.

ಇದನ್ನೂ ಓದಿ... ರೋಷನ್ ಬೇಗ್ ಮನೆ ಮೇಲೆ ಇ.ಡಿ. ದಾಳಿ


ಜಮೀರ್ ಅಹಮ್ಮದ್ ಖಾನ್ ಅವರ ಮನೆ

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು