ಬೆಂಗಳೂರು: ‘ಹಲವು ವರ್ಷಗಳಿಂದ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ದ್ವಿಭಾಷಾ ಸೂತ್ರವನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ಆಮ್ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಪ್ರಾದೇಶಿಕ ಅಸಮತೋಲನವನ್ನು ಸರಿಪಡಿಸಲು, ಕನ್ನಡ ಭಾಷೆಯ ಹಿರಿಮೆಯನ್ನು ಎತ್ತಿ ಹಿಡಿಯಲು, ದೇಶದಲ್ಲಿ ಸ್ಥಳೀಯ ಭಾಷೆಗಳ ಉಳಿವಿಗಾಗಿ ದ್ವಿಭಾಷಾ ಸೂತ್ರ ಜಾರಿಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

‘ವಿದ್ಯಾರ್ಥಿಗಳ ಮೇಲಿನ ಅನಗತ್ಯ ಹೊರೆ ತಪ್ಪಿಸಲು, ಹಿಂದಿ ಭಾಷೆ ಹೇರಿಕೆಯಿಂದ ವಿದ್ಯಾರ್ಥಿಗಳು ಶಿಕ್ಷಣ ಮೊಟಕುಗೊಳಿಸುತ್ತಿರುವುದನ್ನು ತಡೆಯಲು ಹಾಗೂ ಎಲ್ಲ ಕನ್ನಡಪರ ಮನಸ್ಸುಗಳ ಹಲವು ದಶಕಗಳ ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ತ್ರಿಭಾಷಾ ಸೂತ್ರದಿಂದಾಗಿ ಅನೇಕ ವಿದ್ಯಾರ್ಥಿಗಳು ಹಿಂದಿ ಭಾಷೆಯಲ್ಲಿ ನಪಾಸಾಗುತ್ತಿದ್ದಾರೆ. ಪಂಜಾಬ್ ಹಾಗೂ ದೆಹಲಿಯಲ್ಲಿ ದ್ವಿಭಾಷಾ ನೀತಿ ಜಾರಿಯಲ್ಲಿದೆ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರ ಹೋರಾಟಗಾರರ ಒತ್ತಡಕ್ಕೆ ಮಣಿದು ತ್ರಿಭಾಷಾ ಸೂತ್ರವನ್ನು ಕೈಬಿಟ್ಟಿದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.