ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಷಿ ವರದಿ ಅನುಷ್ಟಾನಕ್ಕೆ ಆಗ್ರಹ

ಅನಿರ್ದಿಷ್ಟ ಧರಣಿ ಸತ್ಯಾಗ್ರಹದ ಎಚ್ಚರಿಕೆ
Last Updated 8 ನವೆಂಬರ್ 2019, 20:18 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗ ಸಂಬಂಧ ಡಾ. ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ನಗರದ ಮೌರ್ಯ ವೃತ್ತದಲ್ಲಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಶುಕ್ರವಾರ 5ನೇ ದಿನದ ಧರಣಿ ನಡೆಯಿತು.

ಸರೋಜಿನಿ ಮಹಿಷಿ ವರದಿ ಸಲ್ಲಿಕೆಯಾಗಿ ಮೂರು ದಶಕಗಳು ಕಳೆದರೂ ಅದು ಜಾರಿಗೆ ಬಂದಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದಿಂದಲೇ ಈ ವರದಿ ದೂಳು ಹಿಡಿದಿದೆ. ತಮಿಳುನಾಡು, ಮಹಾರಾಷ್ಟ್ರ, ಒಡಿಶಾಗಳಲ್ಲಿ ಶೇ 90ರಷ್ಟು ಸ್ಥಳೀಯರಿಗೇ ಉದ್ಯೋಗಾವಕಾಶ ಕೊಡಲಾಗಿದೆ. ರಾಜ್ಯದಲ್ಲೂ ಈ ವ್ಯವಸ್ಥೆ ಜಾರಿಗೆ ಬರಲು ಒಗ್ಗಟ್ಟಿನ ಹೋರಾಟ ಅಗತ್ಯ ಎಂದು ಧರಣಿ ನಿರತರು ಆಗ್ರಹಿಸಿದರು.

ಕನ್ನಡದ ನೆಲ, ಜಲವನ್ನು ಉದ್ಯಮಗಳಿಗೆ ನೀಡುವಾಗ, ಇಲ್ಲಿನ ಜನರಿಗೆ ಹೆಚ್ಚಿನ ಉದ್ಯೋಗ ಕೊಡಿಸುವುದೂ ಅಗತ್ಯ. ಸರ್ಕಾರ ಈ ನಿಟ್ಟಿನಲ್ಲಿ ದೃಢ ನಿಶ್ಚಯ ಮಾಡಿ, ಮಹಿಷಿ ವರದಿ ಅನುಷ್ಠಾನಕ್ಕೆ ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT