ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗ ವರದಿ ಅನುಷ್ಠಾನ: ಶಿಫಾರಸಿಗೆ ಒತ್ತಾಯ

Last Updated 6 ಮಾರ್ಚ್ 2021, 20:58 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೇರಿದ್ದ ಪ್ರತಿಭಟನಕಾರರು, ವರದಿಯ ತ್ವರಿತ ಅನುಷ್ಠಾನಕ್ಕೆ ಆಗ್ರಹಿಸಿದರು.

‘ಒಳ ಮೀಸಲಾತಿ ಬಗ್ಗೆ ವೈಜ್ಞಾನಿಕವಾಗಿ ವರ್ಗೀಕರಿಸಿ ಅಧ್ಯಯನ ನಡೆಸಿದ್ದ ಆಯೋಗ, ಒಂಬತ್ತು ವರ್ಷಗಳ ಹಿಂದೆಯೇ ಈ ಕುರಿತು ಶಿಫಾರಸುಗಳನ್ನು ಮಾಡಿದೆ. ಹಿಂದುಳಿದ ಪರಿಶಿಷ್ಟ ಉಪ ಜಾತಿಗಳಿಗೆ ಸೌಲಭ್ಯ ತಲುಪಿಸುವ ಉದ್ದೇಶದಿಂದ ಒಟ್ಟು ಶೇ 15ರಷ್ಟು ಮೀಸಲಾತಿ ನೀಡಿ, ಸೌಲಭ್ಯ ನೀಡುವಂತೆ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ವರದಿಯನ್ನು ತ್ವರಿತವಾಗಿ ಜಾರಿಗೆ ತರಬೇಕು. ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೆ ತರಬೇಕು‘ ಎಂದರು.

‘ವರದಿ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಇದು ಅತ್ಯಂತ ಶೋಚನೀಯ. ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಇದೇ 25ರಿಂದ ಆದಿ ಜಾಂಬವ ಜನಾಂಗದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಮ್ಮ ಬೆಂಬಲವಿದೆ’ ಎಂದೂ ಪ್ರತಿಭಟನಕಾರರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT