ಗುರುವಾರ , ಆಗಸ್ಟ್ 5, 2021
21 °C

ಇಮ್ರಾನ್‌ ಪಾಷಾ, ಬೆಂಬಲಿಗರು ಮತ್ತೆ ಪೊಲೀಸ್‌ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಾದರಾಯನಪುರ ವಾರ್ಡ್‌ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಮತ್ತು ಅವರ 22 ಮಂದಿ ಬೆಂಬಲಿಗರನ್ನು ನ್ಯಾಯಾಲಯ ಮೂರು ದಿನಗಳ ಅವಧಿಗೆ ಜೆ.ಜೆ. ನಗರ ಪೊಲೀಸರ ವಶಕ್ಕೆ ನೀಡಿದೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ಇಮ್ರಾನ್ ಪಾಷಾ ಮತ್ತು ಇತರ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿ, ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.

ತಮ್ಮ ವಶಕ್ಕೆ ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಮ್ರಾನ್ ಪಾಷಾಗೆ ಈ ಹಿಂದೆಯೇ ಕೊರೊನಾ ತಪಾಸಣಾ ವರದಿ ಬಂದಿದ್ದು, ಪೊಲೀಸ್ ವಶದಲ್ಲಿರುವ ಅವರ ಬೆಂಬಲಿಗರ ಗಂಟಲು ದ್ರವ ಸಂಗ್ರಹಿಸಲಾಗಿದೆ. ಎರಡು ದಿನಗಳಲ್ಲಿ ಆ ವರದಿ ಬರಲಿದೆ. ವರದಿಯಲ್ಲಿ ಕೊರೊನಾ ದೃಢಪಟ್ಟರೆ ಅಂಥವರನ್ನು ಆಸ್ಪತ್ರೆಗೆ ದಾಖಲಿಸಲಾಗುವುದು. ಇಲ್ಲದಿದ್ದರೆ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದರು.

ಪಾಷಾ, ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಭಾನುವಾರ ಬೆಂಬಲಿಗರ ಜೊತೆ ಮೆರವಣಿಗೆಯಲ್ಲಿ ತೆರಳಿದ್ದರು. ನಿಯಮ ಉಲ್ಲಂಘಿಸಿದ ಮತ್ತು ವ್ಯಕ್ತಿಗತ ಅಂತರ ಕಾಯ್ದುಕೊಳ್ಳದೆ ಮೆರವಣಿಗೆ ನಡೆಸುವ ಮೂಲಕ ಸಾಂಕ್ರಾಮಿಕ ರೋಗ ಹರಡಲು ಯತ್ನಿಸಿದ ಆರೋಪದಡಿ ಪಾಷಾ ಹಾಗೂ ಅವರ ಬೆಂಬಲಿಗರನ್ನು ಬಂಧಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು