ಬುಧವಾರ, ಆಗಸ್ಟ್ 4, 2021
22 °C

ಇಮ್ರಾನ್‌ ಪಾಷಾ, ಬೆಂಬಲಿಗರಿಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ ಕಾರಣಕ್ಕೆ ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಮತ್ತು 21 ಜನರಿಗೆ ಹೈಕೋರ್ಟ್‌ ತಲಾ ₹5 ಸಾವಿರ ದಂಡ ವಿಧಿಸಿದೆ.

‘ಈ ಮೊತ್ತವನ್ನು  ಮುಖ್ಯಮಂತ್ರಿಗಳ ಕೋವಿಡ್‌–19 ಪರಿಹಾರ ನಿಧಿಗೆ ಪಾವತಿಸಬೇಕು’ ಎಂದು ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ ಶಾಸ್ತ್ರಿ ಅವರಿದ್ದ ಏಕ ಸದಸ್ಯ ಪೀಠ ಆದೇಶಿಸಿದೆ.

ಜಾಮೀನು ಕೋರಿ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೂ, ಹೈಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸುಳ್ಳು ಮಾಹಿತಿ ‌ನೀಡಿದ್ದಾರೆ. ಏಳು ದಿನಗಳಲ್ಲಿ ಎಲ್ಲರೂ ದಂಡ ಪಾವತಿಸಬೇಕು ಎಂದು ತಿಳಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು