ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ವತಿಯಿಂದ ನೂತನ ಕಾನೂನು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ದೀಕ್ಷಾರಂಭ ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಜಯಕರ ಎಸ್.ಎಂ. ಉದ್ಘಾಟಿಸಿದರು.
ವಕೀಲರು ಪ್ರಜಾಹಿತ ಕರ್ತವ್ಯದ ಜೊತೆಗೆ ಇಂದಿನ ಕೌಶಲ ಯುಗದಲ್ಲಿ ವಾಕ್ಚಾತುರ್ಯವನ್ನು ಕರಗತ ಮಾಡಿಕೊಳ್ಳಬೇಕು ಎಂದು ಜಯಕರ ಎಸ್.ಎಂ. ಸಲಹೆ ನೀಡಿದರು.
ರಾಜ್ಯ ಕಾನೂನು ವಿಶ್ವವಿದ್ಯಾಲಯದ ಮಾಜಿ ಪ್ರಭಾರ ಕುಲಪತಿ ಸಿ.ಎಸ್. ಪಾಟೀಲ್., ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೇಖ್ ಲತೀಫ್, ಕಾನೂನು ಕಾಲೇಜಿನ ಪ್ರಾಂಶುಪಾಲ ಸುರೇಶ್ ವಿ. ನಾಡಗೌಡ, ಕಾನೂನು ಅಧ್ಯಯನ ವಿಭಾಗದ ಅಧ್ಯಕ್ಷ ವಿ. ಸುದೇಶ್, ಮಾಜಿ ಅಧ್ಯಕ್ಷ ಎನ್. ದಶರಥ್, ಕಾರ್ಯಕ್ರಮದ ಸಂಯೋಜಕ ಎನ್. ಸತೀಶ್ ಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.