ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟನೆ: ಕಡಿಮೆ ಬೆಲೆಗೆ ಗುಣಮಟ್ಟದ ಔಷಧ

Published 19 ಅಕ್ಟೋಬರ್ 2023, 15:59 IST
Last Updated 19 ಅಕ್ಟೋಬರ್ 2023, 15:59 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿದೆ. ಇದರ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಸಂಸದ ಡಿ.ವಿ. ಸದಾನಂದ ಗೌಡ ತಿಳಿಸಿದರು.

ಅಬ್ಬಿಗೆರೆಯ ಬಿಬಿಎಂಪಿ ಕಚೇರಿ ಎದುರು ನಿರ್ಮಾಣವಾಗಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರ ಉದ್ಘಾಟಿಸಿ, ಮಾತನಾಡಿದರು. 

‘ಈ ಕೇಂದ್ರಗಳಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಅತ್ಯಂತ ಗುಣಮಟ್ಟದ ಔಷಧಗಳು ದೊರೆಯುತ್ತವೆ. ಬಡವರು ದುಬಾರಿ ಬೆಲೆಯ ಔಷಧ ಖರೀದಿಸಲು ಆಗುವುದಿಲ್ಲ ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿ ದ್ದಾರೆ. ಜನೌಷಧ ಕೇಂದ್ರದಲ್ಲಿ ಹಾಗೂ ಇತರ ಔಷಧ ಅಂಗಡಿಗಳಲ್ಲಿ ದೊರೆಯುವ ಔಷಧಿಗಳು ಒಂದೇ ಆಗಿರುತ್ತವೆ. ಬೇರೆ ಬೇರೆ ಹೆಸರು ಹೊಂದಿರುತ್ತವೆ. ಆದ್ದರಿಂದ ಔಷಧ ಅಗತ್ಯ ಇರುವವರು ಈ ಕೇಂದ್ರದ ಲಾಭ ಪಡೆದುಕೊಳ್ಳಬೇಕು’ ಎಂದು ಹೇಳಿದರು. 

ಶಾಸಕ ಎಸ್. ಮುನಿರಾಜು, ‘ಜನಸಾಮಾನ್ಯರ ಆರ್ಥಿಕ ಹೊರೆ ಕಡಿಮೆ ಮಾಡಲು ವೈದ್ಯರು ಆದಷ್ಟು ಜನೌಷಧಗಳನ್ನು ಬರೆದು ಕೊಡಬೇಕು. ಕಡಿಮೆ ದರಕ್ಕೆ ಹಾಗೂ ಗುಣಮಟ್ಟದ ಔಷಧ ದೊರೆಯುವ ಜನೌಷಧಿ ಕೇಂದ್ರಗಳನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು’ ಎಂದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT