ಬೆಂಗಳೂರು: ದೇಶದಲ್ಲಿ ಪ್ರಥಮ ‘ರ‍್ಯಾಪಿಡ್ ರಸ್ತೆಗೆ’ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಬೆಳಿಗ್ಗೆ ಚಾಲನೆ ನೀಡಲಿದ್ದಾರೆ.
ಇಂದಿರಾನಗರ 100 ಅಡಿ ರಸ್ತೆ ಜಂಕ್ಷನ್‌ನಿಂದ ಬಿಡಿಎ ಕಾಂಪ್ಲೆಕ್ಸ್ ಮೂಲಕ ಬಿಎಂಟಿಸಿ ಬಸ್ ಡಿಪೊವರೆಗೆ‘ಪ್ರೀಕಾಸ್ಟ್ ಪೋಸ್ಟ್ ಟೆನ್ಷನಿಂಗ್ ಕಾಂಕ್ರೀಟ್ ಪೇವ್‌ಮೆಂಟ್’ ತಂತ್ರಜ್ಞಾನದ ‘ರ‍್ಯಾಪಿಡ್ ರಸ್ತೆ’ಯನ್ನು ಬಿಬಿಎಂಪಿ ವತಿಯಿಂದ ಪ್ರಾಯೋಗಿಕವಾಗಿ ನಿರ್ಮಿಸಲಾಗಿದೆ.
‘ಒಂದು ವಾರದಲ್ಲಿ ರಸ್ತೆ ನಿರ್ಮಾಣಗೊಂಡಿದೆ. ಕ್ಷೇತ್ರದ ಇತರೆ ಭಾಗದಲ್ಲೂ ಇದೇ ತಂತ್ರಜ್ಞಾನ ಅಳವಡಿಸಿ ರಸ್ತೆ ನಿರ್ಮಿಸಲು ಯೋಜಿಸಲಾಗಿದೆ’ ಎಂದು ಸಿ.ವಿ. ರಾಮನ್ ನಗರ ವಿಧಾನಸಭೆ ಕ್ಷೇತ್ರದ ಶಾಸಕ ಎಸ್. ರಘು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.