ಬೆಂಗಳೂರು: ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ ಸ್ಥಾಪಿಸಿರುವ ‘ಸೇಂಟ್ ಜಾನ್ಸ್ ಹಿರಿಯರ ಕಾಳಜಿ ಕೇಂದ್ರ’ವನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಕೋರಮಂಗಲದಲ್ಲಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ‘ಆರು ದಶಕಗಳಿಂದ ಸೆಂಟ್ ಜಾನ್ಸ್ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಹಿರಿಯರ ಕಾಳಜಿ ಕೇಂದ್ರ ಆರಂಭಿಸಿ, ಗುಣಮಟ್ಟದ ಸೇವೆ ನೀಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಸಂಸ್ಥೆಯ ಉತ್ತಮ ಕಾರ್ಯಕ್ಕೆ ಸಹಕಾರ ನೀಡಲಾಗುವುದು’ ಎಂದರು.

ತ್ರಿಶೂರ್ನ ಆರ್ಚ್ ಬಿಷಪ್ ಮಾರ್ ಆಂಡ್ರ್ಯೂಸ್ ಥಾಝತ್ ಅಧ್ಯಕ್ಷತೆ ವಹಿಸಿದ್ದರು. ಸೇಂಟ್ ಜಾನ್ಸ್ ನ್ಯಾಷನಲ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸ್ ಆಡಳಿತ ಮಂಡಳಿ ಅಧ್ಯಕ್ಷ ರೆವರೆಂಡ್ ವಿಕ್ಟರ್ ಹೆನ್ರಿ ಠಾಕೂರ್, ಹಿರಿಯರ ಕಾಳಜಿ ಕೇಂದ್ರದ ಮುಖ್ಯಸ್ಥ ಡಾ. ಅರವಿಂದ್ ಕಸ್ತೂರಿ, ಫಾದರ್ ಜೇಸುದಾಸ್ ರಾಜಮಣಿಕಂ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.