ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಐಇಸಿನಲ್ಲಿನ ಕೋವಿಡ್‌ ಆರೈಕೆ ಕೇಂದ್ರದ ಉದ್ಘಾಟನೆ, 5,000 ಹಾಸಿಗೆಗಳು ಸಿದ್ದ

Last Updated 27 ಜುಲೈ 2020, 12:11 IST
ಅಕ್ಷರ ಗಾತ್ರ
ADVERTISEMENT
""
""
""

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (ಬಿ ಐ ಇ ಸಿ ) ನಿರ್ಮಿಸಲಾಗಿರುವ ಕೋವಿಡ್ ಆರೈಕೆ ಕೇಂದ್ರವನ್ನು ಸೋಮವಾರ ಉದ್ಘಾಟಿಸಲಾಯಿತು.

ಈ ಕೋವಿಡ್ ಆರೈಕೆ ಕೇಂದ್ರದಲ್ಲಿ ಒಟ್ಟು 5,000 ಹಾಸಿಗೆಗಳು ಆರೈಕೆಗೆ ಸಿದ್ಧವಾಗಿದ್ದು, ಜೊತೆಗೆ 1,500 ಹಾಸಿಗೆಗಳನ್ನು ಪ್ರತ್ಯೇಕವಾಗಿ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ಹಾಲ್ ಸಂಖ್ಯೆ-01ರಲ್ಲಿ ಮೀಸಲಿರಿಸಲಾಗಿದೆ. ಇಂದು ಹಾಲ್ ಸಂಖ್ಯೆ-05 ರಲ್ಲಿ 1,536 ಹಾಸಿಗೆಗಳನ್ನು ಸೋಂಕಿತರ ಆರೈಕೆಗೆ ಮುಕ್ತಗೊಳಿಸಲಾಗುತ್ತಿದೆ.

ಬಿಐಇಸಿ ಕೇಂದ್ರದ ಪ್ರಮುಖ ಅಂಶಗಳು

* ಹಾಲ್ ಸಂಖ್ಯೆ-05 ರಲ್ಲಿ 24 ವಾರ್ಡ್‌ಗಳನ್ನು ಸ್ಥಾಪಿಸಲಾಗಿದೆ.

* ಊಟದ ಕೊಠಡಿಯಲ್ಲಿ ಒಮ್ಮೆಗೆ 350 ಮಂದಿ ಆಹಾರ ಸೇವಿಸಬಹುದಾಗಿದೆ.

* ಮನರಂಜನಾ ಕೊಠಡಿಯಲ್ಲಿ ಟಿವಿ, ಕೂರಲು ಹಾಸನದ ವ್ಯವಸ್ಥೆ, ಸೋಫಾ, ಕುರ್ಚಿ ಹಾಗೂ ಫ್ಯಾನ್ ವ್ಯವಸ್ಥೆ ಕಲ್ಪಿಸಲಾಗಿದೆ.

* ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಗಳ ವ್ಯವಸ್ಥೆ ಕಲ್ಪಿಸಲಾಗಿದೆ.

* ಸ್ನಾನ, ಮೂತ್ರ ವಿಸರ್ಜನೆ, ಕೈ ತೊಳೆಯಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

* ಕೋವಿಡ್ ಆರೈಕೆ ಕೇಂದ್ರದಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ನಿಯಂತ್ರಣ ಕೊಠಡಿ ಸ್ಥಾಪಿಸಲಾಗುತ್ತಿದೆ.

* ಕೋವಿಡ್ ಪಾಸಿಟಿವ್ ಆಗಿರುವವರು ನೊಂದಣಿ/ದಾಖಲು ಮಾಡಿಕೊಳ್ಳಲು ಪ್ರತ್ಯೇಕ ಕೊಠಡಿ ನಿರ್ಮಿಸಲಾಗಿದೆ.

* ಕೋವಿಡ್ ಆರೈಕೆ ಕೇಂದ್ರವನ್ನು ನಿರ್ವಹಣೆ ಮಾಡಲು ಪ್ರತ್ಯೇಕ ಸಿಬ್ಬಂದಿ ವ್ಯವಸ್ಥೆ ಮಾಡಲಾಗಿದೆ.

* ಹೌಸ್ ಕೀಪಿಂಗ್, ಲ್ಯಾಂಡರಿ ವ್ಯವಸ್ಥೆಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

* ಸುರಕ್ಷತಾ ಕ್ರಮವಾಗಿ ಮಾರ್ಷಲ್, ಕೆ.ಎಸ್.ಆರ್.ಪಿ ಸಿಬ್ಬಂದಿ ನಿಯೋಜಿಸಲಾಗಿದೆ. ಅಗ್ನಿ ಶಾಮಕ ವಾಹನಗಳನ್ನು ಇರಿಸಲಾಗಿದೆ.

* ವಿದ್ಯುತ್ ಸಮಸ್ಯೆ ಆಗದಂತೆ ಕೆ.ಪಿ.ಟಿ.ಸಿ.ಎಲ್‌ನಿಂದ ಪ್ರತ್ಯೇಕ ಲೈನ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

*ಕೋವಿಡ್ ಸೋಂಕಿತ ರೋಗಿಗಳಿಗೆ ಸರ್ಕಾರ ಸುತ್ತೋಲೆ ಹೊರಡಿಸಿರುವ ಆಹಾರದ ಮೆನುವಿನ ಪ್ರಕಾರ ಕಾಲಕಾಲಕ್ಕೆ ಆಹಾರ ಒದಗಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT