ಶುಕ್ರವಾರ, ಜನವರಿ 22, 2021
19 °C

ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಲಹಂಕ: ದೇಶದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ರಂಗಗಳ ಅಭಿವೃದ್ಧಿಗೆ ಬ್ರಾಹ್ಮಣ ಸಮುದಾಯವು ತನ್ನದೇ ಕೊಡುಗೆಗಳನ್ನು ನೀಡುತ್ತಾ ಬಂದಿದೆ ಎಂದು ಶಾಸಕ ಎಸ್. ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.

ಯಲಹಂಕ ತಾಲ್ಲೂಕು ಬ್ರಾಹ್ಮಣ ಸಂಘದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಸಮಾಜವಾದ ಹಾಗೂ ಕೆಲವು ಪ್ರಗತಿಪರ ಸಂಘಟನೆಗಳ ಧೋರಣೆಗಳಿಂದ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣವರ್ಗ ತೊಂದರೆ ಅನುಭವಿಸಬೇಕಾಗಿದೆ ಎಂದರು.

ಬ್ರಾಹ್ಮಣ ವಿಧವೆಯರು ಹಾಗೂ ಹಿರಿಯ ನಾಗರಿಕರಿಗೆ ಆಶ್ರಯ ಯೋಜನೆಯಡಿಯಲ್ಲಿ 5 ಸಾವಿರ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ವಿಶ್ವನಾಥ್ ಭರವಸೆ ನೀಡಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದಮೂರ್ತಿ ಮಾತನಾಡಿ, ಸಂಘವು ತಾಲ್ಲೂಕು ಮಟ್ಟದಲ್ಲಿ ವಿಸ್ತರಣೆಯಾಗಿರುವುದರಿಂದ ತಾಲ್ಲೂಕಿನ ಬ್ರಾಹ್ಮಣ ಸಮುದಾಯಕ್ಕೆ ಅನುಕೂಲವಾಗಲಿದೆ. ಬ್ರಾಹ್ಮಣರು ಕೀಳರಿಮೆ ಬಿಟ್ಟು ಸ್ವಾಭಿಮಾನಿಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು