ಯಲಹಂಕ: ‘ನಗರೋತ್ಥಾನ ವಿಶೇಷ ಮೂಲಭೂತ ಸೌಕರ್ಯ ಮತ್ತು ಸರೋವರ ಅಭಿವೃದ್ಧಿ ಯೋಜನೆ’ಯಡಿ ನಗರದ ಸಮಗ್ರ ಅಭಿವೃದ್ಧಿಗಾಗಿ ಪಾಲಿಕೆಗೆ ₹7300 ಕೋಟಿ ಅನುದಾನ ಒದಗಿಸಲಾಗಿದ್ದು, ಯೋಜನೆಗಳನ್ನು ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ‘ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆಯ ಮದರ್ ಡೇರಿ ವೃತ್ತದ ಬಳಿ ನಿರ್ಮಿಸಿರುವ ‘ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಮೇಲ್ಸೇತುವೆ’ಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

‘ಸ್ಮಾರ್ಟ್ ಸಿಟಿ ಯೋಜನೆಯಡಿ 30 ಕಿ.ಮೀ ಉದ್ದದ 36 ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ನಗರೋತ್ಥಾನ ಯೋಜನೆಯಡಿ ಯಲಹಂಕ ಕ್ಷೇತ್ರದ ಅಭಿವೃದ್ಧಿಗೆ ₹ 400 ಕೋಟಿ ಅನುದಾನ ನೀಡಲಾಗಿದೆ’ ಎಂದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ದೇಶಭಕ್ತಿ ಎಲ್ಲೆಡೆ ಮೂಡಬೇಕು ಎಂಬ ಉದ್ದೇಶದಿಂದ ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರನ್ನಿಡಲಾಗಿದೆ. ಇದನ್ನು ವಿರೋಧಿಸುವವರು ಸಾವರ್ಕರ್ ಅವರ ಜೀವನಚರಿತ್ರೆ ಓದಬೇಕು. ಯಲಹಂಕದಲ್ಲಿ ಇದೇ ಮಾದರಿಯಲ್ಲಿ ಇನ್ನೂ 4 ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು‘ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.