ಶನಿವಾರ, ಜನವರಿ 28, 2023
21 °C

ಪ್ರಗತಿ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆಯಿತು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಜಯರಾಮ್ ವಿವಿಧ ಯೋಜನೆಗಳ ಮಾಹಿತಿ ಪಡೆದು, ಪರಿಶೀಲನೆ ನಡೆಸಿದರು.

ಅನುಷ್ಠಾನಗೊಂಡಿರುವ ಕಾಮಗಾರಿಗಳಿಗಿಂತ, ಬಾಕಿ ಇರುವ ಕಾಮಗಾರಿಗಳ ಸಂಖ್ಯೆಯೇ ಜಾಸ್ತಿ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಾದೇಶ ನೀಡಿದ ಮಾತ್ರಕ್ಕೆ ಕೆಲಸ ಆಗಿದೆ ಎಂದರ್ಥವಲ್ಲ ಎಂದು ತಿಳಿಸಿದರು. ಅನಿರೀಕ್ಷಿತ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುತ್ತೇನೆ. ಲೋಪ ಕಂಡುಬಂದರೆ ಸಂಬಂಧಿಸಿದವರನ್ನು ಸ್ಥಳದಲ್ಲೇ ಅಮಾನತು ಮಾಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ಬಿ.ಆರ್.ಪೂರ್ಣಿಮಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು