ಬೆಂಗಳೂರು: ಅತಿಥಿ ಶಿಕ್ಷಕರ ವೇತನ ಹೆಚ್ಚಿಸಬೇಕು ಎಂದು ಶಾಸಕ ಕೆ. ಗೋಪಾಲಯ್ಯ ಹೇಳಿದರು.

ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅತಿಥಿ ಶಿಕ್ಷಕರಿಗೆ ಒಂದು ತಿಂಗಳಿಗೆ ₹12 ಸಾವಿರ ವೇತನ ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಿಸಲು ಕಷ್ಟವಾಗುತ್ತಿದ್ದು, ಕನಿಷ್ಠ ₹18 ಸಾವಿರ ವೇತನ ನೀಡುವಂತೆ ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದ್ದೇನೆ. ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹೆಚ್ಚಿದ್ದು, ಕೂಡಲೇ ಸರ್ಕಾರ ಶಿಕ್ಷಕರನ್ನು ನೇಮಿಸಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳಲ್ಲಿ ಪಾಠ ಮಾಡಲು ಶಿಕ್ಷಕರೇ ಸಿಗುವುದಿಲ್ಲ’ ಎಂದು ಹೇಳಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಅತ್ಯುತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಬೆಂಗಳೂರು ಉತ್ತರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎಸ್. ಹರೀಶ್, ಟ್ರಸ್ಟ್ ಅಧ್ಯಕ್ಷ ಎನ್. ಜಯರಾಮ್, ಬಿಬಿಎಂಪಿ ಮಾಜಿ ಸದಸ್ಯ ಕೆ.ವಿ. ರಾಜೇಂದ್ರ ಕುಮಾರ್, ಬಿಜೆಪಿ ಮಂಡಲದ ಅಧ್ಯಕ್ಷ ರಾಘವೇಂದ್ರ ಶೆಟ್ಟಿ, ಡಿಡಿಪಿಐ ಅಂಜನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾನಾಥ್, ಬಿಜೆಪ ಮುಖಂಡರಾದ ಎನ್. ವೆಂಕಟೇಶ್, ಶಿವಾನಂದ ಮೂರ್ತಿ, ವೆಂಕಟೇಶ್ ಮೂರ್ತಿ, ಪದ್ಮಾವತಿ ಶ್ರೀನಿವಾಸ್, ನಾಗರತ್ನ ಲೋಕೇಶ್, ಯಶೋಧ ನಾರಾಯಣ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.